ADVERTISEMENT

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಚಳಿ; ಮಂಜು ಕವಿದ ವಾತಾವರಣ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2025, 14:15 IST
Last Updated 6 ಡಿಸೆಂಬರ್ 2025, 14:15 IST
ಮಳೆ
ಮಳೆ   

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದ್ದು, ಚಳಿಯ ತೀವ್ರತೆ ಇರಲಿದೆ. ಹಗಲು ವೇಳೆ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ನಗರದಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕರಾವಳಿ ಭಾಗದಲ್ಲಿ ಕನಿಷ್ಠ ತಾಪಮಾನದಲ್ಲಿ ಯಾವುದೇ ಬದಲಾವಣೆ ಇಲ್ಲ. ಆದರೆ, ಒಳನಾಡು ಭಾಗದ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ಮತ್ತಷ್ಟು ಇಳಿಕೆ ಆಗಲಿದೆ ಎಂದು ಮುನ್ಸೂಚನೆ ನೀಡಿದೆ.

ಕಳೆದ 24 ಗಂಟೆಯಲ್ಲಿ ಬೀದರ್‌ನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ತಾಪಮಾನ 13.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಧಾರವಾಡದಲ್ಲಿ ಗರಿಷ್ಠ 26.2 ಡಿಗ್ರಿ ಸೆಲ್ಸಿಯಸ್‌ ಇದ್ದರೆ, ಕನಿಷ್ಠ 16.6 ಸೆಲ್ಸಿಯಸ್‌ ಹಾಗೂ ಗದಗದಲ್ಲಿ ಗರಿಷ್ಠ 28.6 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ 17.4 ಡಿಗ್ರಿ ಸೆಲ್ಸಿಯಸ್‌ಗೆ ಕುಸಿದಿದೆ.

ಶನಿವಾರ ಬೆಳಿಗ್ಗೆ 80.30ಕ್ಕೆ ಕೊನೆಯಾದಂತೆ ಈಶಾನ್ಯ ಮಾನ್ಸೂನ್‌ ದುರ್ಬಲವಾಗಿತ್ತು. ಕರಾವಳಿ ಕರ್ನಾಟಕ ಹಾಗೂ ದಕ್ಷಿಣ ಒಳನಾಡಿನ ಕೆಲವು ಭಾಗದಲ್ಲಿ ಶುಕ್ರವಾರ ಮಧ್ಯಾಹ್ನ ಹಾಗೂ ಸಂಜೆ ಸಾಧಾರಣ ಮಳೆಯಾಗಿತ್ತು ಎಂದು ಇಲಾಖೆ ತಿಳಿಸಿದೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.