ADVERTISEMENT

Karnataka Weather: ರಾಜ್ಯದಲ್ಲಿ ಇನ್ನೂ ಐದು ದಿನ ಬೀಸಲಿದೆ ಶೀತ ಗಾಳಿ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2025, 2:17 IST
Last Updated 19 ಡಿಸೆಂಬರ್ 2025, 2:17 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಶೀತಗಾಳಿ ಮುಂದುವರಿಯಲಿದ್ದು, ಚಳಿ ಹೆಚ್ಚಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಾಹಿತಿ ನೀಡಿದೆ.

ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ಶೀತಗಾಳಿ ಹೆಚ್ಚಾಗುವ ಸಾಧ್ಯೆತೆಯಿದೆ. ಹವಾಮಾನ ಇಲಾಖೆ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದು, ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. 

ADVERTISEMENT

ಇನ್ನುಳಿದ ಜಿಲ್ಲೆಗಳಲ್ಲಿ ಬೆಳಿಗ್ಗೆ ಮಂಜು ಮುಸುಕಿದ ವಾತಾವರಣ ಮತ್ತು ಸಾಧಾರಣ ಚಳಿ ಇರಲಿದ್ದು, ತುಂತುರು ಮಳೆಯಾಗುವ ಸಂಭವವಿದೆ.

ರಾಜ್ಯದಲ್ಲಿ ನಿನ್ನೆ ಬೀದರ್‌ನಲ್ಲಿ ಕನಿಷ್ಠ 10 ಡಿಗ್ರಿ ಸೆಲ್ಸಿಯಸ್, ಕಲಬುರಗಿಯಲ್ಲಿ 11 ಡಿಗ್ರಿ ಸೆಲ್ಸಿಯಸ್‌, ಬಾಗಲಕೋಟೆ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಹಾವೇರಿ, ಕೋಲಾರ,ರಾಯಚೂರು, ವಿಜಯಪುರ, ತುಮಕೂರು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 12 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಉಳಿದ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 13, 14,16 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದ್ದು, ದಕ್ಷಿಣ ಕನ್ನಡದಲ್ಲಿ ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.