ADVERTISEMENT

ಪ್ರಾಂಶುಪಾಲರ 310 ಹುದ್ದೆ ಭರ್ತಿಗೆ ಶೀಘ್ರ ಚಾಲನೆ: ಡಾ.ಸಿ.ಎನ್‌.ಅಶ್ವತ್ಥನಾರಾಯಣ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2022, 19:49 IST
Last Updated 21 ಮಾರ್ಚ್ 2022, 19:49 IST
ಅಶ್ವತ್ಥನಾರಾಯಣ
ಅಶ್ವತ್ಥನಾರಾಯಣ   

ಬೆಂಗಳೂರು: ‘ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ 310 ಪ್ರಾಂಶುಪಾಲರ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಮೂಲಕ ಶೀಘ್ರ ಚಾಲನೆ ನೀಡಲಾಗುವುದು’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ತಿಳಿಸಿದರು.

ವಿಧಾನ ಪರಿಷತ್‌ನಲ್ಲಿ ಸೋಮವಾರ ಅ.ದೇವೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯ 440 ಸರ್ಕಾರಿ ಪದವಿ ಕಾಲೇಜುಗಳಲ್ಲಿ ಮಂಜೂರಾಗಿರುವ ಎಲ್ಲ 412 ಪ್ರಾಂಶುಪಾಲರ ಹುದ್ದೆಗಳು ಖಾಲಿ ಉಳಿದಿವೆ. ಸದ್ಯಕ್ಕೆ ಸೇವಾ ಜೇಷ್ಠ್ಯತೆ ಆಧಾರದಲ್ಲಿ ಹಿರಿಯ ಬೋಧಕರು ಪ್ರಭಾರ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ’ ಎಂದು ವಿವರಿಸಿದರು.

‘ಪ್ರಾಂಶುಪಾಲರ ಹುದ್ದೆಗೆ ಬಡ್ತಿ ನೀಡಿ ಭರ್ತಿ ಮಾಡಲು ನಿಯಮಗಳಲ್ಲಿ ಅವಕಾಶ ಇಲ್ಲ. ಹೀಗಾಗಿ, ಪ್ರಾಂಶುಪಾಲರ ಖಾಲಿ ಹುದ್ದೆಗಳನ್ನು ಯುಜಿಸಿ ನಿಯಮಗಳ ಅನ್ವಯ ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುತ್ತಿದೆ’ ಎಂದು ವಿವರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.