ADVERTISEMENT

ಕಾಲೇಜು, ವಿವಿ ಪ್ರಾಧ್ಯಾಪಕರಿಗೆ ಇದೇ 15ರವರೆಗೆ ರಜೆ ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 2 ಜುಲೈ 2020, 15:15 IST
Last Updated 2 ಜುಲೈ 2020, 15:15 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   
""

ಬೆಂಗಳೂರು: ಉನ್ನತ ಶಿಕ್ಷಣ ಇಲಾಖೆಯ ಅಡಿ ಕೆಲಸ ಮಾಡುತ್ತಿರುವ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳ ಬೋಧಕ ಸಿಬ್ಬಂದಿಗೆ ರಜೆ ಘೋಷಿಸಿ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.

ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳ ಬೋಧಕ ಸಿಬ್ಬಂದಿಗೆ ಜುಲೈ 15ರವರೆಗೆ ರಜೆ ಘೋಷಿಸಲಾಗಿದೆ. ಎಲ್ಲ ಸಿಬ್ಬಂದಿ ಜುಲೈ 16ರಂದು ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಶೀತಲ್ ಎಂ.ಹಿರೇಮಠ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT