ADVERTISEMENT

ಆತಂಕ ಇಲ್ಲದೆ ಶಾಲೆಗೆ ಬನ್ನಿ: ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2021, 6:52 IST
Last Updated 21 ಆಗಸ್ಟ್ 2021, 6:52 IST
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ    

ಬೆಂಗಳೂರು: ‘ರಾಜ್ಯದಲ್ಲಿ 9ನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗಿನ ಶಾಲಾ-ಕಾಲೇಜುಗಳು ಸೋಮವಾರದಿಂದ (ಆ. 23) ಆರಂಭವಾಗಲಿದ್ದು, ಶಾಲೆಗಳನ್ನು ಆರಂಭಿಸಲು ಸರ್ಕಾರ ಎಲ್ಲ ಸಿದ್ಧತೆ ಮಾಡಿಕೊಂಡಿದೆ. ವಿದ್ಯಾರ್ಥಿಗಳು ಯಾವುದೇ ಆತಂಕ ಇಲ್ಲದೆ ಶಾಲೆಗೆ ಬರಬಹುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಆರ್‌ಟಿ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ಶಾಲೆ ಆರಂಭದ ದಿನ ಬೆಂಗಳೂರಿನ ಕೆಲವು ಶಾಲೆಗಳಿಗೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಜೊತೆ ನಾನೂ ಭೇಟಿ ಕೊಡುತ್ತೇನೆ’ ಎಂದರು.

‘ಶಾಲೆಗಳ ಆರಂಭಕ್ಕೆ ಎಲ್ಲ ರೀತಿಯ ಸಿದ್ಧತೆ ಆಗಿದೆ. ಶಿಕ್ಷಕರಿಗೆ ಲಸಿಕೆ ನೀಡಲಾದೆ. ಶಾಲಾ ಕೊಠಡಿಗಳನ್ನು ಸ್ಯಾನಿಟೈಜ್ ಮಾಡಲಾಗಿದೆ. ಅಂತರ ಕಾಯ್ದುಕೊಂಡು ತರಗತಿಗಳನ್ನು ನಡೆಸಲಾಗುವುದು. ದಿನ ಬಿಟ್ಟು ದಿನದಂತೆ ಬ್ಯಾಚ್​ಗಳನ್ನು ಮಾಡಿ ಶಾಲೆ ನಡೆಸಲಾಗುತ್ತದೆ. ಪೋಷಕರ ಸಮ್ಮತಿ ಪಡೆದೇ ಮಕ್ಕಳು ಶಾಲೆಗೆ ಬರಬೇಕು. ಎಲ್ಲ ಪೋಷಕರು ಕೂಡ ಲಸಿಕೆ ಹಾಕಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ADVERTISEMENT

‘ಮಕ್ಕಳ ಆರೋಗ್ಯದ ಬಗ್ಗೆ ಪೋಷಕರು ಗಮನ ಹರಿಸಬೇಕು. ಒಂದೂವರೆ ವರ್ಷದಿಂದ ವಿದ್ಯಾರ್ಥಿಗಳು ಶಾಲೆಗಳಿಗೆ ಹೋಗಿಲ್ಲ. ಹೀಗಾಗಿ ಹಂತಹಂತವಾಗಿ ಶಾಲೆಗ ಬರಬೇಕು ಎನ್ನುವುದು ನಮ್ಮ ಉದ್ದೇಶವಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.