ADVERTISEMENT

Comed-K Exam: ನಾಳೆ ಕಾಮೆಡ್‌–ಕೆ ಪರೀಕ್ಷೆ

​ಪ್ರಜಾವಾಣಿ ವಾರ್ತೆ
Published 8 ಮೇ 2025, 23:59 IST
Last Updated 8 ಮೇ 2025, 23:59 IST
<div class="paragraphs"><p>&nbsp; ಕಾಮೆಡ್‌–ಕೆ&nbsp; ಪರೀಕ್ಷೆ 	</p></div>

  ಕಾಮೆಡ್‌–ಕೆ  ಪರೀಕ್ಷೆ

   

–ಪ್ರಜಾವಾಣಿ ಚಿತ್ರ

ಬೆಂಗಳೂರು: ಖಾಸಗಿ ಎಂಜಿನಿಯರಿಂಗ್‌ ಕಾಲೇಜುಗಳಲ್ಲಿ ವಿವಿಧ ಕೋರ್ಸ್‌ಗಳ ಪ್ರವೇಶಕ್ಕಾಗಿ ಕರ್ನಾಟಕದ ವೈದ್ಯಕೀಯ ಎಂಜಿನಿಯರಿಂಗ್ ಮತ್ತು ದಂತ ಕಾಲೇಜುಗಳ ಒಕ್ಕೂಟ (ಕಾಮೆಡ್‌–ಕೆ) ಮೇ 10ರಂದು ಪ್ರವೇಶ ಪರೀಕ್ಷೆ ನಡೆಸುತ್ತಿದೆ.

ADVERTISEMENT

ದೇಶಾದ್ಯಂತ 1,31,937 ಅಭ್ಯರ್ಥಿಗಳು ಪರೀಕ್ಷೆಗೆ ದಾಖಲಾಗಿದ್ದಾರೆ. 28 ರಾಜ್ಯಗಳು, 179 ನಗರಗಳು ಮತ್ತು 248 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಬೆಳಿಗ್ಗೆ 8.30ರಿಂದ 11.30, ಮಧ್ಯಾಹ್ನ 1ರಿಂದ ಸಂಜೆ 4 ಹಾಗೂ ಸಂಜೆ 5.30 ರಿಂದ ರಾತ್ರಿ 8.30 ರವರೆಗೆ ಮೂರು ಹಂತದ ಸಮಯ ನಿಗದಿ ಮಾಡಲಾಗಿದೆ. ಈ ಪರೀಕ್ಷೆಯು ಕಂಪ್ಯೂಟರ್ ಆಧಾರಿತವಾಗಿರುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.