ADVERTISEMENT

ಮೇ 28ಕ್ಕೆ ಕಾಮೆಡ್-ಕೆ ಪರೀಕ್ಷೆ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2023, 19:39 IST
Last Updated 18 ಫೆಬ್ರುವರಿ 2023, 19:39 IST
   

ಬೆಂಗಳೂರು: ‘ಕರ್ನಾಟಕ ವೃತ್ತಿಪರ ಕಾಲೇಜುಗಳ ಒಕ್ಕೂಟ (ಕಾಮೆಡ್-ಕೆ)’ ಮೇ 28ರಂದು ಪ್ರವೇಶ ಪರೀಕ್ಷೆ ನಡೆಸಲು (ಯುಜಿಇಟಿ–2023) ನಿರ್ಧರಿಸಿದೆ.

150 ಖಾಸಗಿ ಅನುದಾನರಹಿತ ಎಂಜಿನಿಯರಿಂಗ್ ಕಾಲೇಜುಗಳ ಆಡಳಿತ ಮಂಡಳಿ ಕೋಟಾದ ಸೀಟುಗಳ ಪ್ರವೇಶಕ್ಕಾಗಿ ದೇಶದ 150ಕ್ಕೂ ಹೆಚ್ಚು ನಗರಗಳ 400 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಏ. 24 ಕೊನೆಯ ದಿನ, ಪ್ರವೇಶ ಬಯಸುವ ಅಭ್ಯರ್ಥಿಗಳು www.comedk.org, www.unigauge.com ಸಂಪರ್ಕಿಸಬಹುದು.

ADVERTISEMENT

ಸುಮಾರು ಒಂದು ಲಕ್ಷ ಅಭ್ಯರ್ಥಿಗಳು ನೋಂದಣಿ ಮಾಡಿಕೊಳ್ಳುವ ನಿರೀಕ್ಷೆ ಹೊಂದಿರುವುದಾಗಿ ಪರೀಕ್ಷಾ ನಿರ್ವಹಣಾ ಸಂಸ್ಥೆ ಹೇಳಿದೆ. ಈ ವರ್ಷದಿಂದ ವಿದ್ಯಾರ್ಥಿಗಳಿಗೆ ಕೋರ್ಸ್‌ಗಳ ಕಲಿಕೆ ಜತೆಗೆ ಕೌಶಲ ತರಬೇತಿ ನೀಡಲಾಗುವುದು. ಅದಕ್ಕಾಗಿ ಬೆಂಗಳೂರಿನಲ್ಲಿ ನಾಲ್ಕು, ಮೈಸೂರು, ಕಲಬುರಗಿ, ಮಂಗಳೂರು ಹಾಗೂ ಬೆಳಗಾವಿಯಲ್ಲಿ ಎಂಟು ‘ಇನ್ನೋವೇಶನ್ ಹಬ್‌’ ಸ್ಥಾಪಿಸಲಾಗಿದೆ ಎಂದು ಕಾಮೆಡ್‌–ಕೆ ಮಾಹಿತಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.