ADVERTISEMENT

ಮೇ 12ಕ್ಕೆ ಕಾಮೆಡ್‌–ಕೆ ಪರೀಕ್ಷೆ: ಅರ್ಜಿ ಸಲ್ಲಿಕೆ ಆರಂಭ

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2024, 14:10 IST
Last Updated 6 ಫೆಬ್ರುವರಿ 2024, 14:10 IST
ಕಾಮೆಡ್‌–ಕೆ ಪರೀಕ್ಷೆ–ಪ್ರಾತಿನಿಧಿಕ ಚಿತ್ರ
ಕಾಮೆಡ್‌–ಕೆ ಪರೀಕ್ಷೆ–ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ಕರ್ನಾಟಕ ವೈದ್ಯಕೀಯ, ಎಂಜಿನಿಯರಿಂಗ್‌ ಮತ್ತು ದಂತ ವೈದ್ಯಕೀಯ ಕಾಲೇಜುಗಳ ಒಕ್ಕೂಟ (ಕಾಮೆಡ್-) ಎಂಜಿನಿಯರಿಂಗ್‌ ಕೋರ್ಸ್‌ಗಳ ಪ್ರವೇಶಕ್ಕೆ ಮೇ 12ರಂದು ಪರೀಕ್ಷೆ ನಡೆಸಲಿದೆ.

ಈ ಕುರಿತು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕಾಮೆಡ್-ಕೆ ಕಾರ್ಯನಿರ್ವಾಹಕ ಕಾರ್ಯದರ್ಶಿ ಕುಮಾರ್‌,  ಭಾರತದ 200ಕ್ಕೂ ಅಧಿಕ ನಗರಗಳ 400ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಕಾಮೆಡ್‌–ಕೆ ಹಾಗೂ ಯುಜಿಇಟಿ, ಯುನಿ-ಗೇಜ್ ಸಂಯೋಜಿತ ಪರೀಕ್ಷೆಗಳನ್ನು ಆನ್‌ಲೈನ್‌ ಮೂಲಕ ನಡೆಸಲಾಗುತ್ತದೆ. ಪರೀಕ್ಷೆ ಎದುರಿಸುವ ವಿದ್ಯಾರ್ಥಿಗಳು ಕರ್ನಾಟಕದ 150 ಎಂಜಿನಿಯರಿಂಗ್‌ ಕಾಲೇಜುಗಳು ಹಾಗೂ ಭಾರತದ 50ಕ್ಕೂ ಹೆಚ್ಚು ಖಾಸಗಿ ಹಾಗೂ ಡೀಮ್ಡ್‌ ವಿಶ್ವವಿದ್ಯಾಲಯಗಳಲ್ಲಿ ಪ್ರವೇಶ ಪಡೆಯಬಹುದು ಎಂದು ಮಾಹಿತಿ ನೀಡಿದರು.

ಆಸಕ್ತರು www.comedk.org ಅಥವಾ www.unigauge.com ಮೂಲಕ ಹೆಸರು ನೋಂದಾಯಿಸಿಕೊಳ್ಳಬಹುದು. ಅರ್ಜಿ ಸಲ್ಲಿಸಲು ಏ. 5 ಕೊನೆಯ ದಿನ. ಈ ಬಾರಿ ಒಂದು ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ನಿರೀಕ್ಷೆ ಇದೆ ಎಂದರು. 

ADVERTISEMENT

ಎರಾ ಫೌಂಡೇಷನ್‌ ಕಾರ್ಯನಿರ್ವಾಹಕ ನಿರ್ದೇಶಕ ಮುರಳೀಧರ ಉಪಸ್ಥಿತರಿದ್ದರು.   

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.