ADVERTISEMENT

ಕಾಮೆಡ್‌–ಕೆ ಪರೀಕ್ಷೆ ಮೇ 9ಕ್ಕೆ

​ಪ್ರಜಾವಾಣಿ ವಾರ್ತೆ
Published 29 ಜನವರಿ 2026, 16:15 IST
Last Updated 29 ಜನವರಿ 2026, 16:15 IST
<div class="paragraphs"><p>&nbsp; ಕಾಮೆಡ್‌–ಕೆ&nbsp; ಪರೀಕ್ಷೆ 	</p></div>

  ಕಾಮೆಡ್‌–ಕೆ  ಪರೀಕ್ಷೆ

   

–ಪ್ರಜಾವಾಣಿ ಚಿತ್ರ

ಬೆಂಗಳೂರು: ಕರ್ನಾಟಕದ ವೈದ್ಯಕೀಯ, ಎಂಜಿನಿಯರಿಂಗ್‌ ಹಾಗೂ ದಂತ ವೈದ್ಯಕೀಯ ಕಾಲೇಜುಗಳ ಒಕ್ಕೂಟ (ಕಾಮೆಡ್‌–ಕೆ) 2026–27ನೇ ಶೈಕ್ಷಣಿಕ ವರ್ಷದ ಎಂಜಿನಿಯರಿಂಗ್‌ ಕೋರ್ಸ್‌ಗಳ ಪ್ರವೇಶಕ್ಕಾಗಿ ಮೇ 9ರಂದು ಪ್ರವೇಶ ಪರೀಕ್ಷೆ ನಡೆಸಲಿದೆ.

ADVERTISEMENT

ದೇಶದ 200 ನಗರಗಳ 400ಕ್ಕೂ ಹೆಚ್ಚು ಕೇಂದ್ರಗಳಲ್ಲಿ ನಡೆಯುವ ಈ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ರಾಜ್ಯದ 150ಕ್ಕೂ ಹೆಚ್ಚು ಖಾಸಗಿ ಅನುದಾನರಹಿತ ಎಂಜಿನಿಯರಿಂಗ್‌ ಕಾಲೇಜುಗಳಿಗೆ ಪ್ರವೇಶ ಪಡೆಯಬಹುದಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಫೆ.3ರಂದು ಆರಂಭವಾಗಿ ಮಾರ್ಚ್ 16ರಂದು ಮುಕ್ತಾಯವಾಗಲಿದೆ. ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ www.comedk.org ಮತ್ತು www.unigauge.com ವೆಬ್‌ಸೈಟ್‌ಗಳಿಗೆ ಭೇಟಿ ನೀಡಬಹುದು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಕೌನ್ಸೆಲಿಂಗ್‌ ಆರಂಭಿಸುವುದನ್ನು ವಿಳಂಬ ಮಾಡಿದರೆ 
ಕರ್ನಾಟಕದ ಹೊರಗಿನ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಿಗದಿತ ವೇಳಾಪಟ್ಟಿಯಂತೆ ಕೌನ್ಸೆಲಿಂಗ್‌ ಪ್ರಕ್ರಿಯೆ ಮುಂದುವರಿಸಲಿದೆ ಎಂದು ಕಾಮೆಡ್‌–ಕೆ ಅಧಿಕಾರಿಗಳು ಹೇಳಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.