ಬೆಂಗಳೂರು: ಕೊರೊನಾ ಲಾಕ್ಡೌನ್ನಿಂದಾಗಿ ಕಾಮೆಡ್–ಕೆ ಮತ್ತು ಯೂನಿ–ಗೇಜ್ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಮೇ ಮೊದಲ ವಾರ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ತಿಳಿಸಲಾಗಿದೆ.
ಜೂನ್ ಮೊದಲ ವಾರ ಈ ಎರಡೂ ವಿಭಾಗಗಳಿಗೆ ಪ್ರವೇಶ ಪರೀಕ್ಷೆ ನಡೆಯುವ ನಿರೀಕ್ಷೆ ಇದೆ. ಈ ಮೊದಲು ಪ್ರಕಟಿಸಿದ್ದಂತೆ ಮೇ 10ರಂದು ಪರೀಕ್ಷೆ ನಡೆಯಬೇಕಿತ್ತು. ಈ ಮಧ್ಯೆ, ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಹೊಸ ಅಣಕು ಪರೀಕ್ಷೆಗಳನ್ನು ನೀಡಲಾಗಿದ್ದು, www.comedk.org ಮತ್ತು www. unigauge.com ಇಲ್ಲಿಗೆ ಭೇಟಿ ನೀಡಬಹುದು ಎಂದು ತಿಳಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.