ADVERTISEMENT

ಕಾಮೆಡ್‌–ಕೆ: ಜುಲೈ 18ರಿಂದ ಸೀಟು ಹಂಚಿಕೆ ಪ್ರಕ್ರಿಯೆ

​ಪ್ರಜಾವಾಣಿ ವಾರ್ತೆ
Published 15 ಜುಲೈ 2025, 16:22 IST
Last Updated 15 ಜುಲೈ 2025, 16:22 IST
   

ಬೆಂಗಳೂರು: ಕರ್ನಾಟಕದ ವೈದ್ಯಕೀಯ ಎಂಜಿನಿಯರಿಂಗ್ ಮತ್ತು ದಂತ ಕಾಲೇಜುಗಳ ಒಕ್ಕೂಟ (ಕಾಮೆಡ್‌–ಕೆ) ಖಾಸಗಿ ಎಂಜಿನಿಯರಿಂಗ್‌ ಕಾಲೇಜುಗಳಲ್ಲಿನ ವಿವಿಧ ಕೋರ್ಸ್‌ಗಳ ಸೀಟು ಹಂಚಿಕೆ ಪ್ರಕ್ರಿಯೆಯನ್ನು ಜುಲೈ 18ರಿಂದ ಆರಂಭಿಸುತ್ತಿದೆ.

ಕಾಮೆಡ್‌–ಕೆ ಪ್ರವೇಶಕ್ಕೆ ಅರ್ಹತೆ ಪಡೆದಿರುವ ವಿದ್ಯಾರ್ಥಿಗಳು ಕಾಲೇಜು ಮತ್ತು ಕೋರ್ಸ್‌ಗಳನ್ನು ನಮೂದಿಸಲು (ಚಾಯ್ಸ್‌) ಜುಲೈ 20ರವರೆಗೆ ಅವಕಾಶ ನೀಡಲಾಗಿದೆ. 22ರಂದು ಅಣಕು ಸೀಟು ಹಂಚಿಕೆ ಪಟ್ಟಿ ಪ್ರಕಟಿಸಲಾಗುತ್ತದೆ. 24ರವರೆಗೆ ತಿದ್ದುಪಡಿ ಮಾಡಿಕೊಳ್ಳಬಹುದು. 28ರಂದು ಅಂತಿಮ ಪಟ್ಟಿ ಪ್ರಕಟಿಸಲಾಗುತ್ತದೆ. ಆಗಸ್ಟ್ 4 ಒಳಗೆ ಆಯ್ಕೆ ಮಾಡಿಕೊಂಡ ಕಾಲೇಜುಗಳಿಗೆ ಪ್ರವೇಶ ಪಡೆಯಬೇಕು ಎಂದು ಕಾಮೆಡ್‌–ಕೆ ಹೇಳಿದೆ.  

ಕರ್ನಾಟಕದ 150 ಎಂಜಿನಿಯರಿಂಗ್‌ ಕಾಲೇಜುಗಳು ಹಾಗೂ ವಿವಿಧ ರಾಜ್ಯಗಳ 50ಕ್ಕೂ ಹೆಚ್ಚು ಖಾಸಗಿ ಹಾಗೂ ಡೀಮ್ಡ್‌ ವಿಶ್ವವಿದ್ಯಾಲಯಗಳಲ್ಲಿ ಎಂಜಿನಿಯರಿಂಗ್‌ ಕೋರ್ಸ್‌ಗಳ ಪ್ರವೇಶಕ್ಕೆ ಮೇ 12ರಂದು ಪರೀಕ್ಷೆ ನಡೆಸಲಾಗಿತ್ತು. ಕರ್ನಾಟಕದ 35,124 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 1,03,799 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.