ADVERTISEMENT

ಕಾಂಗ್ರೆಸ್ ಸಾಂಸ್ಕೃತಿಕ ಘಟಕದ ಅಧ್ಯಕ್ಷರಾಗಿ ಸಾಧು ಕೋಕಿಲ ನೇಮಕ: ಡಿಕೆಶಿ ಅಭಿನಂದನೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 2 ಮಾರ್ಚ್ 2023, 11:53 IST
Last Updated 2 ಮಾರ್ಚ್ 2023, 11:53 IST
   

ಬೆಂಗಳೂರು: ನಟ, ಸಂಗೀತ ನಿರ್ದೇಶಕ ಸಾಧು ಕೋಕಿಲ ಅವರನ್ನು ಕೆಪಿಸಿಸಿಯ ಸಾಂಸ್ಕೃತಿಕ ಘಟಕದ ಅಧ್ಯಕ್ಷರನ್ನಾಗಿ ಗುರುವಾರ ನೇಮಕ ಮಾಡಲಾಗಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಅವರು ಈ ನೇಮಕ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಡಿ.ಕೆ ಶಿವಕುಮಾರ್‌, ‘ಕೆಪಿಸಿಸಿ ಸಾಂಸ್ಕೃತಿಕ ಘಟಕದ ಅಧ್ಯಕ್ಷರಾಗಿ ನೇಮಕಗೊಂಡ ಕನ್ನಡ ನಾಡಿನ ಜನಮೆಚ್ಚಿನ ಕಲಾವಿದ ಸಾಧು ಕೋಕಿಲ ಅವರಿಗೆ ಹಾರ್ದಿಕ ಶುಭಾಷಯಗಳನ್ನು ಕೋರುತ್ತೇವೆ. ತಮ್ಮ ಕಲಾ ಸೇವೆಯೊಂದಿಗೆ ಜನ ಸೇವೆಯೂ ಯಶಸ್ವಿಯಾಗಿ ಮುಂದುವರೆಯಲಿ’ ಎಂದು ಆಶಿಸಿದ್ದಾರೆ.

ADVERTISEMENT

ಸಾಧುಕೋಕಿಲ ಅವರು ಹಲವು ದಿನಗಳಿಂದ ಕಾಂಗ್ರೆಸ್‌ನಲ್ಲಿ ಗುರುತಿಸಿಕೊಂಡಿದ್ದರು. ಮೇಕೆದಾಟು ಪಾದಯಾತ್ರೆಯಲ್ಲಿಯೂ ಅವರು ಕಾಣಿಸಿಕೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.