ADVERTISEMENT

ವಾಣಿಜ್ಯ ಬ್ಯಾಂಕುಗಳ ಬೆಳೆಸಾಲ ಒಂದೇ ಕಂತಿನಲ್ಲಿ ಮನ್ನಾ: ಸರ್ಕಾರದ ಮಹತ್ವದ ಆದೇಶ 

​ಪ್ರಜಾವಾಣಿ ವಾರ್ತೆ
Published 12 ಜೂನ್ 2019, 4:49 IST
Last Updated 12 ಜೂನ್ 2019, 4:49 IST
   

ಬೆಂಗಳೂರು: ರೈತರು ವಾಣಿಜ್ಯ ಬ್ಯಾಂಕುಗಳಿಂದ ಪಡೆದಿರುವ ಬೆಳೆಸಾಲ ಮನ್ನಾ ಯೋಜನೆಗೆ ಸಂಬಂಧಿಸಿದಂತೆ ಅರ್ಹತೆ ಹೊಂದಿರುವ ರಿಸ್ಟ್ರಕ್ಚರ್ಡ್ ಸಾಲಗಳು, ಅರ್ಹತೆ ಹೊಂದಿರುವ ಓವರ್ ಡ್ಯೂ ಸಾಲಗಳು ಹಾಗೂ ಪ್ರೋತ್ಸಾಹ ಧನಕ್ಕೆ ಅರ್ಹತೆ ಹೊಂದಿರುವ ಸಾಲಗಳಿಗೆ ಈಗಾಗಲೇ ಬಿಡುಗಡೆಯಾದ ಮೊತ್ತವನ್ನು ಕಡಿತಗೊಳಿಸಿ, ಉಳಿದ ಸಂಪೂರ್ಣ ಮೊತ್ತವನ್ನು ಒಂದೇ ಕಂತಿನಲ್ಲಿ ರೈತರ ಖಾತೆಗೆ ಬಿಡುಗಡೆ ಮಾಡಲು ಅನುಮೋದನೆ ನೀಡಿ ಸರ್ಕಾರ ಮಹತ್ವಪೂರ್ಣ ಆದೇಶ ಹೊರಡಿಸಿದೆ.

ಎನ್‌ಪಿಎ ಸಾಲಗಳು ಮತ್ತು ದಿನಾಂಕ 1-1-2018 ರಿಂದ ಬಡ್ಡಿ ಮೊತ್ತ ಪಾವತಿಸುವ ಬಗ್ಗೆ ಪ್ರತ್ಯೇಕವಾಗಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸರ್ಕಾರ ತನ್ನ ಆದೇಶದಲ್ಲಿ ತಿಳಿಸಿದೆ.

ಸಾಲ ಮನ್ನಾ ಆದ ಬಗ್ಗೆ ದೃಢೀಕರಣ ಪತ್ರವನ್ನು ಎಲ್ಲ ಫಲಾನುಭವಿಗಳಿಗೂ ಬಿಡುಗಡೆ ಮಾಡುವುದಾಗಿ ಸರ್ಕಾರ ತಿಳಿಸಿದೆ.

ADVERTISEMENT

ಸರ್ಕಾರಿ ಆದೇಶದ ಪ್ರತಿಗಳು ಇಲ್ಲಿವೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.