ADVERTISEMENT

₹25 ಕೋಟಿ ತೆರಿಗೆ ವಂಚನೆ ಪತ್ತೆ

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2026, 16:25 IST
Last Updated 11 ಫೆಬ್ರುವರಿ 2026, 16:25 IST
₹3200 ಕೋಟಿ ಟಿಡಿಎಸ್‌ ಹಗರಣ ಪತ್ತೆ ಮಾಡಿದ ಆದಾಯ ತೆರಿಗೆ ಇಲಾಖೆ
₹3200 ಕೋಟಿ ಟಿಡಿಎಸ್‌ ಹಗರಣ ಪತ್ತೆ ಮಾಡಿದ ಆದಾಯ ತೆರಿಗೆ ಇಲಾಖೆ   

ಬೆಂಗಳೂರು: ವಾಣಿಜ್ಯ ಇಲಾಖೆಯ ಬೆಂಗಳೂರು ದಕ್ಷಿಣ ವಲಯದ ಜಾರಿ ವಿಭಾಗದ ಅಧಿಕಾರಿಗಳು ವಿವಿಧ ಅಂಗಡಿಗಳ ಮೇಲೆ ದಾಳಿ ನಡೆಸಿ ₹25 ಕೋಟಿ ಮೊತ್ತದ ತೆರಿಗೆ ವಂಚನೆಯನ್ನು ಪತ್ತೆ ಮಾಡಿದ್ದಾರೆ.

ನಗರದ ಯಲಹಂಕ, ಕಲ್ಯಾಣನಗರ, ಹೆಬ್ಬಾಳ, ಬಾಣಸವಾಡಿ, ಇಂದಿರಾನಗರ ವ್ಯಾಪ್ತಿಯಲ್ಲಿರುವ ಕಟ್ಟಡ ನಿರ್ಮಾಣ ಸಾಮಗ್ರಿ ಮತ್ತು ಎಲೆಕ್ಟ್ರಿಕಲ್‌ ಉತ್ಪನ್ನಗಳ ಪೂರೈಕೆದಾರರು, ವಾಹನಗಳ ಬಿಡಿಭಾಗಗಳ ವ್ಯಾಪಾರಿಗಳು ಮತ್ತು ಹೋಟೆಲ್‌ಗಳ ಮೇಲೆ ವಾಣಿಜ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದರು.

ಈ ವರ್ತಕರು ನಕಲಿ ಇನ್ವಾಯ್ಸ್‌ ಮತ್ತು ನಕಲಿ ಇನ್‌ಪುಟ್‌ ಟ್ಯಾಕ್ಸ್‌ ಕ್ರೆಡಿಟ್‌ (ಐಟಿಸಿ) ಕ್ಲೇಮುಗಳನ್ನು ಬಳಸಿಕೊಂಡು, ತೆರಿಗೆ ಪಾವತಿಯಿಂದ ತಪ್ಪಿಸಿಕೊಂಡಿದ್ದಾರೆ. ಈ ವರ್ತಕರ ಐಟಿಸಿ ಕ್ಲೇಮು ಮತ್ತು ಜಿಎಸ್‌ಟಿ ಪಾವತಿಯಲ್ಲಿ ವ್ಯತ್ಯಾಸವಿರುವುದು ಪತ್ತೆಯಾಗಿದೆ. ಈವರೆಗೆ ₹25 ಕೋಟಿಯಷ್ಟು ತೆರಿಗೆ ವಂಚನೆ ಮಾಡಿರುವುದು ಗೊತ್ತಾಗಿದ್ದು, ತಡರಾತ್ರಿಯವರೆಗೂ ಪರಿಶೀಲನೆ ಮುಂದುವರಿದಿತ್ತು ಎಂದು ವಾಣಿಜ್ಯ ತೆರಿಗೆ ಇಲಾಖೆಯ ಪ್ರಕಟಣೆ ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.