
ಬೆಂಗಳೂರು: ಶಿಡ್ಲಘಟ್ಟದ ಪೌರ ಆಯುಕ್ತೆ ಅಮೃತಾಗೌಡ ಅವರಿಗೆ ಬೆದರಿಕೆ ಹಾಕಿದ ವ್ಯಕ್ತಿಯ ವಿರುದ್ಧ ತಕ್ಷಣವೇ ಕಾನೂನು ಕ್ರಮ ತೆಗೆದುಕೊಳ್ಳಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ಒತ್ತಾಯಿಸಿದ್ದಾರೆ.
ಬುಧವಾರ ಬೆಳಿಗ್ಗೆಯೇ ಮುಖ್ಯ ಕಾರ್ಯದರ್ಶಿ ಅವರಿಗೆ ಕರೆ ಮಾಡಿದ್ದ ಕುಮಾರಸ್ವಾಮಿ ಅವರು, ರಾಜಕಾರಣಿಗಳು ಸರ್ಕಾರಿ ಅಧಿಕಾರಿಯನ್ನು ನಿಂದಿಸಿದ್ದರ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು ಎಂದು ಸಚಿವರ ಕಚೇರಿಯು ತಿಳಿಸಿದೆ.
‘ಮಹಿಳಾ ಅಧಿಕಾರಿ ಒಬ್ಬರಿಗೆ ಕಾಂಗ್ರೆಸ್‌ನ ಪರಾಜಿತ ಅಭ್ಯರ್ಥಿಯೊಬ್ಬರು ಕರೆ ಮಾಡಿ ಅಸಹ್ಯ ಪದಗಳನ್ನು ಬಳಸಿ ನಿಂದಿಸಿರುವುದು, ಬೆದರಿಕೆ ಹಾಕಿರುವುದು ಖಂಡನೀಯ. ಕಾನೂನುಬದ್ಧವಾಗಿ ಕೆಲಸ ಮಾಡುವ ಅಧಿಕಾರಿಗಳಿಗೆ ಈ ಸರ್ಕಾರದಲ್ಲಿ ರಕ್ಷಣೆ ಇಲ್ಲವೇ ಎಂದು ಮುಖ್ಯ ಕಾರ್ಯದರ್ಶಿ ಅವರನ್ನು ಪ್ರಶ್ನಿಸಿದರು’ ಎಂದು ಮಾಹಿತಿ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.