
ಪ್ರಜಾವಾಣಿ ವಾರ್ತೆ
ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ನಿಗಮ, ಮಂಡಳಿಗಳ ನಿರ್ದೇಶಕರು ಮತ್ತು ಸದಸ್ಯರನ್ನು ಆಯ್ಕೆಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಸಚಿವ ಜಿ. ಪರಮೇಶ್ವರ ಅಧ್ಯಕ್ಷತೆಯಲ್ಲಿ ಮೂವರು ಸದಸ್ಯರ ಸಮಿತಿ ರಚಿಸಿದ್ದಾರೆ.
ಕಾರ್ಮಿಕ ಸಚಿವ ಸಂತೋಷ್ ಲಾಡ್ ಮತ್ತು ಶಾಸಕ ರಿಜ್ವಾನ್ ಅರ್ಷದ್ ಅವರನ್ನು ಸಮಿತಿಯ ಸದಸ್ಯರನ್ನಾಗಿ ನೇಮಿಸಲಾಗಿದೆ. ನಿಗಮ, ಮಂಡಳಿಗಳ ಸದಸ್ಯರು, ನಿರ್ದೇಶಕರ ಸ್ಥಾನಗಳಿಗೆ ಆಯ್ಕೆಮಾಡಿ ಪಟ್ಟಿಯನ್ನು ಒಂದು ತಿಂಗಳೊಳಗೆ ಸಲ್ಲಿಸುವಂತೆ ಸಮಿತಿಗೆ ಮುಖ್ಯಮಂತ್ರಿ ಸಮಿತಿ ಸೂಚಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.