ADVERTISEMENT

ಆರೋಗ್ಯ ತರಬೇತಿಯಲ್ಲಿ ಕೌಶಲಾಭಿವೃದ್ಧಿಗೆ ಸಮಿತಿ

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2021, 17:26 IST
Last Updated 9 ಆಗಸ್ಟ್ 2021, 17:26 IST

ಬೆಂಗಳೂರು: ಆರೋಗ್ಯ ಇಲಾಖೆಯ ಅಧೀನದಲ್ಲಿರುವ 19 ಜಿಲ್ಲಾ ಆರೋಗ್ಯ ತರಬೇತಿ ಕೇಂದ್ರಗಳು ಮತ್ತು ನಾಲ್ಕು ಪ್ರಾದೇಶಿಕ ಆರೋಗ್ಯ ತರಬೇತಿ ಕೇಂದ್ರಗಳಲ್ಲಿ ಕೋವಿಡ್‌ ನಿರ್ವಹಣೆಗೆ ಸಂಬಂಧಿಸಿದ ಅಲ್ಪಾವಧಿಯ ಕೌಶಲಾಭಿವೃದ್ಧಿ ತರಬೇತಿ ಆರಂಭಿಸಲು ಆಯಾ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮೇಲುಸ್ತುವಾರಿ ಸಮಿತಿ ರಚಿಸಲಾಗಿದೆ.

ಸರ್ಕಾರಿ ವೈದ್ಯಕೀಯ ಕಾಲೇಜಿನ ಮುಖ್ಯಸ್ಥರು ಅಥವಾ ಸರ್ಕಾರಿ ಆಸ್ಪತ್ರೆಯ ನಿರ್ದೇಶಕರು, ಜಿಲ್ಲಾ ಆರೋಗ್ಯಾಧಿಕಾರಿ, ಜಿಲ್ಲಾ ಶಸ್ತ್ರ ಚಿಕಿತ್ಸಕರು, ಪ್ರಾದೇಶಿಕ ಆರೋಗ್ಯ ತರಬೇತಿ ಕೇಂದ್ರ ಅಥವಾ ಜಿಲ್ಲಾ ಆರೋಗ್ಯ ತರಬೇತಿ ಕೇಂದ್ರದ ಪ್ರಾಂಶುಪಾಲರು ಸಮಿತಿಯ ಸದಸ್ಯರಾಗಿರುತ್ತಾರೆ. ಜಿಲ್ಲಾ ಕೌಶಲಾಭಿವೃದ್ಧಿ ಅಧಿಕಾರಿ ಸಮಿತಿಯ ನೋಡಲ್‌ ಅಧಿಕಾರಿ ಮತ್ತು ಸದಸ್ಯ ಕಾರ್ಯದರ್ಶಿಯಾಗಿರುತ್ತಾರೆ ಎಂದು ಆರೋಗ್ಯ ಇಲಾಖೆ ಸೋಮವಾರ ಹೊರಡಿಸಿರುವ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT