ಐಸ್ಟೋಕ್ ಚಿತ್ರ
ಬೆಂಗಳೂರು: ತುಳುವನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವುದಕ್ಕೆ ಸಂಬಂಧಿಸಿದಂತೆ ಅಧ್ಯಯನ ನಡೆಸಲು, ಐದು ಮಂದಿಯನ್ನು ಒಳಗೊಂಡ ಸಮಿತಿ ರಚಿಸಲಾಗಿದೆ.
ಎರಡನೇ ಭಾಷೆಯಾಗಿ ಘೋಷಿಸಲು ಅನುಸರಿಸಲಾಗುವ ಮಾನದಂಡಗಳ ಬಗ್ಗೆ ಅಧ್ಯಯನ ನಡೆಸಲು ಈ ಸಮಿತಿಯು ಆಂಧ್ರಪ್ರದೇಶಕ್ಕೆ ತೆರಳಲಿದೆ.
ತುಳು ಭಾಷೆಯನ್ನು ಕರ್ನಾಟಕ ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸಬೇಕೆಂಬ ಬೇಡಿಕೆ ಇದೆ. ಈ ಬಗ್ಗೆ ಅನುಸರಿಸಲಾಗುವ ಮಾನದಂಡಗಳ ಬಗ್ಗೆ ಅಧ್ಯಯನ ನಡೆಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಆದೇಶ ಹೊರಡಿಸಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಗಾಯಿತ್ರಿ ಕೆ.ಎಂ. ಅವರು ಸಮಿತಿಯ ಅಧ್ಯಕ್ಷರಾಗಿದ್ದಾರೆ. ಕಾನೂನು ಇಲಾಖೆ ಉಪ ಕಾರ್ಯದರ್ಶಿ ವನಿತಾ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಉಪ ಕಾರ್ಯದರ್ಶಿ ಮೂರ್ತಿ ಕೆ.ಎನ್., ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಹಾಗೂ ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯ ಸುಧಾಕರ್ ಶೆಟ್ಟಿ ಅವರು ಸಮಿತಿಯ ಸದಸ್ಯರಾಗಿದ್ದಾರೆ.
ಮೂರು ತಿಂಗಳೊಳಗೆ ಅಧ್ಯಯನದ ವರದಿ ನೀಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.