ADVERTISEMENT

ದಕ್ಷಿಣ ಕನ್ನಡ: ಸಂಜೆ 6 ಗಂಟೆಯೊಳಗೆ ಅಂಗಡಿ ಮುಂಗಟ್ಟು ಮುಚ್ಚಲು ಡಿಸಿ ಸೂಚನೆ

ಅಹಿತಕರ ಘಟನೆ ಹಿನ್ನೆಲೆ; ನಾಳೆ ಶಾಂತಿ ಸಭೆ

​ಪ್ರಜಾವಾಣಿ ವಾರ್ತೆ
Published 29 ಜುಲೈ 2022, 9:36 IST
Last Updated 29 ಜುಲೈ 2022, 9:36 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಭವಿಸಿದ ಅಹಿತಕರ ಘಟನೆ ಹಿನ್ನೆಲೆಯಲ್ಲಿ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿನ ಎಲ್ಲ ಅಂಗಡಿ ಮುಂಗಟ್ಟುಗಳನ್ನು ಸಂಜೆ 6 ಗಂಟೆಯೊಳಗೆ ಮುಚ್ಚುವಂತೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಸೂಚನೆ ನೀಡಿದ್ದಾರೆ.

ಜನತೆ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಇಲಾಖೆಯೊಂದಿಗೆ ಸಹಕರಿಸಬೇಕು. ಜಿಲ್ಲೆಯ ಎಲ್ಲ ಅಂಗಡಿ ಮುಂಗಟ್ಟುಗಳು ಬೆಳಿಗ್ಗೆ 6 ಗಂಟೆಗೆ ಆರಂಭಗೊಂಡು ಸಂಜೆ 6 ಗಂಟೆಯೊಳಗೆ ಬಾಗಿಲು ಹಾಕಬೇಕು. ಆಗಸ್ಟ್ 1 ರವರಗೆ ಈ ಆದೇಶ ಜಾರಿಯಲ್ಲಿರಲಿದೆ. ಸ್ಥಳೀಯಾಡಳಿತ ಸಂಸ್ಥೆಗಳು ಅಂಗಡಿಗಳ ಮೇಲೆ ನಿಗಾ ಇರಿಸಬೇಕು. ಆಸ್ಪತ್ರೆ, ಮೆಡಿಕಲ್ ಸೇರಿದಂತೆ ತುರ್ತು ಸೇವೆಗಳಿಗೆ ಈ ಆದೇಶ ಆನ್ವಯಿಸುವುದಿಲ್ಲ ಎಂದು ತಿಳಿಸಿದ್ದಾರೆ.

ಶಾಂತಿ ಸಭೆ:ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಜಿಲ್ಲೆಯ ಜನತೆಯ ಸಹಕಾರ ಅತಿ ಮುಖ್ಯ. ಈ ನಿಟ್ಟಿನಲ್ಲಿ ಸಮುದಾಯದ ಪ್ರಮುಖರೊಂದಿಗೆ ನಜು.30 ರಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶಾಂತಿ ಸಭೆ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.