ADVERTISEMENT

ದಕ್ಷಿಣ ಕನ್ನಡದ ನಾಲ್ಕು ತಾಲ್ಲೂಕುಗಳಲ್ಲಿ ಆ.6ರವರೆಗೆ ನಿಷೇಧಾಜ್ಞೆ ಮುಂದುವರಿಕೆ

​ಪ್ರಜಾವಾಣಿ ವಾರ್ತೆ
Published 29 ಜುಲೈ 2022, 10:49 IST
Last Updated 29 ಜುಲೈ 2022, 10:49 IST
   

ಮಂಗಳೂರು: ಅಹಿತಕರ ಘಟನೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜೆಲ್ಲೆಯ ನಾಲ್ಕು ತಾಲ್ಲೂಕುಗಳಲ್ಲಿ ಆಗಸ್ಟ್ 6ರವರೆಗೆ ನಿಷೇಧಾಜ್ಞೆ ಮುಂದುವರಿಸಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.

ಬಂಟ್ವಾಳ, ಪುತ್ತೂರು, ಕಡಬ ಮತ್ತು ಸುಳ್ಯ ತಾಲ್ಲೂಕುಗಳಲ್ಲಿ ಸೆಕ್ಷನ್ 144 ಅಡಿಯಲ್ಲಿ ನಿಷೇಧಾಜ್ಞೆ ಮುಂದುವರಿಯಲಿದೆ.. ಜನತೆ ಗುಂಪು ಗುಂಪಾಗಿ ಓಡಾಡುವುದು, ವಿನಾಕಾರಣ ತಿರುಗಾಡಲು ಅವಕಾಶವಿಲ್ಲ. ಸಾರ್ವಜನಿಕ ಸಭೆ, ಸಮಾರಂಭಗಳಿಗೂ ನಿಷೇಧ ಹೇರಲಾಗಿದೆ ಎಂದವರು ತಿಳಿಸಿದ್ದಾರೆ.

ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಸುರತ್ಕಲ್, ಮೂಲ್ಕಿ, ಪಣಂಬೂರು ಮತ್ತು ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲೂ ಗುರುವಾರ ರಾತ್ರಿಯಿಂದಲೇ ನಿಷೇಧಾಜ್ಞೆ ಜಾರಿಯಲ್ಲಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.