ADVERTISEMENT

ಹಳೇಹುಬ್ಬಳ್ಳಿ ಗಲಭೆ ಪ್ರಕರಣ: ಆತ್ಮಹತ್ಯೆಗೆ ಯತ್ನಿಸಿದ ಆರೋಪಿ

​ಪ್ರಜಾವಾಣಿ ವಾರ್ತೆ
Published 29 ಏಪ್ರಿಲ್ 2022, 14:34 IST
Last Updated 29 ಏಪ್ರಿಲ್ 2022, 14:34 IST
ಹುಬ್ಬಳ್ಳಿಯ ಇಂಡಿ ಪಂಪ್ ಬಳಿಯ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಬಳಿ ನಡೆದ ಗಲಭೆಯಲ್ಲಿ ಕಿಡಿಗೇಡಿಗಳ ಕಲ್ಲು ತೂರಾಟದಿಂದಾಗಿ ಜಖಂಗೊಂಡ ಪೊಲೀಸ್‌ ವಾಹನ - ಪ್ರಜಾವಾಣಿ ಚಿತ್ರ
ಹುಬ್ಬಳ್ಳಿಯ ಇಂಡಿ ಪಂಪ್ ಬಳಿಯ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಬಳಿ ನಡೆದ ಗಲಭೆಯಲ್ಲಿ ಕಿಡಿಗೇಡಿಗಳ ಕಲ್ಲು ತೂರಾಟದಿಂದಾಗಿ ಜಖಂಗೊಂಡ ಪೊಲೀಸ್‌ ವಾಹನ - ಪ್ರಜಾವಾಣಿ ಚಿತ್ರ   

ಹುಬ್ಬಳ್ಳಿ: ಹಳೇಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿ ಮೊಹಮ್ಮದ್‌ ಆರೀಫ್ ನಾಗರಾಳ ಗುರುವಾರ ಮಧ್ಯರಾತ್ರಿ ಟರ್ಪಂಟೈಲ್‌ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಹಳೇಹುಬ್ಬಳ್ಳಿ ಪೊಲೀಸರ ಕಸ್ಟಡಿಯಲ್ಲಿದ್ದ ಆರೀಫ್, ಅಲ್ಲಿದ್ದ ಸಿಬ್ಬಂದಿಗೆ ಟರ್ಪಂಟೈಲ್ ನೀಡುವಂತೆ ವಿನಂತಿಸಿದ್ದಾನೆ. ಗಾಯಕ್ಕೆ ಹಚ್ಚಲು ಕೇಳಿರಬಹುದು ಎಂದು ಸಿಬ್ಬಂದಿ ಬಾಟಲ್ ನೀಡಿದ್ದು, ಅದನ್ನು ತಕ್ಷಣವೇ ಕುಡಿದಿದ್ದಾನೆ. ಅಲ್ಲಿಯೇ ಇದ್ದ ಮತ್ತೊಬ್ಬ ಆರೋಪಿ ಮಹಾನಗರ ಪಾಲಿಕೆಯ ಎಐಎಂಐಎಂ ಸದಸ್ಯ ನಸೀರ್ ಅಹ್ಮದ್ ಹೊನ್ಯಾಳ ಅದನ್ನು ನೋಡಿ ಬಾಟಲಿ ಕಿತ್ತುಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೀಫ್‌ ಚೇತರಿಸಿಕೊಂಡಿದ್ದು, ಕಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.