ಹಣ
ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಅವಧಿಯಲ್ಲಿ ಮೃತಪಟ್ಟ ಇಬ್ಬರು ಶಿಕ್ಷಕರ ಕುಟುಂಬಕ್ಕೆ ಸರ್ಕಾರ ತಲಾ ₹20 ಲಕ್ಷ ಪರಿಹಾರ ಬಿಡುಗಡೆ ಮಾಡಿದೆ.
ಬಾಗಲಕೋಟೆ ಜಿಲ್ಲೆಯ ದಾನಮ್ಮ ಐ ನಂದರಗಿ ಅವರು ರಸ್ತೆ ಅಪಘಾತದಲ್ಲಿ, ಚಿಕ್ಕಬಳ್ಳಾಪುರ ಜಿಲ್ಲೆಯ ವೈ.ವಿ.ರಾಮಕೃಷ್ಣಪ್ಪ ಅವರು ಹೃದಯಾಘಾತದಿಂದ ಮೃತಪಟ್ಟಿದ್ದರು. ಮೃತರ ಅವಲಂಬಿತರಿಗೆ ಪರಿಹಾರಧನ ಮಂಜೂರು ಮಾಡುವಂತೆ ಎರಡೂ ಜಿಲ್ಲಾಡಳಿತಗಳು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದ್ದವು. ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಈಚೆಗೆ ನಡೆದ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನದಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪರಿಹಾರ ಮೊತ್ತವನ್ನು ಬಾಗಲಕೋಟೆ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳ ಖಾತೆಗೆ ಜಮೆ ಮಾಡಿದೆ.
ಮೃತ ಶಿಕ್ಷಕರ ಅವಲಂಬಿತ ಕುಟುಂಬಕ್ಕೆ ಪರಿಹಾರ ಧನ ಬಿಡುಗಡೆ ಮಾಡುವಂತೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.