ಬೆಂಗಳೂರು: ಕೋವಿಡ್‌ನಿಂದ ಇತ್ತೀಚೆಗೆ ಮೃತಪಟ್ಟ ‘ಪ್ರಜಾವಾಣಿ’ಯ ಮೈಸೂರು ಬ್ಯೂರೊ ಉಪ ಸಂಪಾದಕ ಮತ್ತು ವರದಿಗಾರ ಪವನ್ ಹೆತ್ತೂರು ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ₹ 5 ಲಕ್ಷ ಪರಿಹಾರ ಮಂಜೂರು ಮಾಡಿದ್ದಾರೆ.
‘ಪವನ್ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ನೆರವು ನೀಡುವಂತೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮನವಿ ಸಲ್ಲಿಸಿತ್ತು. ಅದಕ್ಕೆ ಸ್ಪಂದಿಸಿರುವ ಯಡಿಯೂರಪ್ಪ ಅವರು ₹ 5 ಲಕ್ಷ ಪರಿಹಾರ ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ’ ಎಂದು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.