ADVERTISEMENT

ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಕ್ಕೆ ₹ 1 ಲಕ್ಷ ಪರಿಹಾರ ಘೋಷಿಸಿದ ರಾಜ್ಯ ಸರ್ಕಾರ

​ಪ್ರಜಾವಾಣಿ ವಾರ್ತೆ
Published 8 ಜುಲೈ 2021, 20:30 IST
Last Updated 8 ಜುಲೈ 2021, 20:30 IST
   

ಬೆಂಗಳೂರು: ಕೋವಿಡ್‌ನಿಂದ ದುಡಿಯುವ ಸದಸ್ಯರನ್ನು ಕಳೆದುಕೊಂಡ ಬಡತನ ರೇಖೆಗಿಂತ ಕೆಳಗಿನ (ಬಿಪಿಎಲ್‌) ಕುಟುಂಬಕ್ಕೆ ₹ 1 ಲಕ್ಷ ಪರಿಹಾರ ಘೋಷಿಸಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.

ನೆರವು ನೀಡುವ ಹೊಣೆಯನ್ನು ಸಾಮಾಜಿಕ ಭದ್ರತೆ ಮತ್ತು ಪಿಂಚಣಿ ನಿರ್ದೇಶನಾಲಯದ ನಿರ್ದೇಶಕರಿಗೆ ನೀಡಲಾಗಿದೆ. ಒಂದು ಕುಟುಂಬದ ಒಬ್ಬರಿಗೆ ಮಾತ್ರ ನೆರವು ಸಿಗಲಿದೆ. ಮೃತ ವ್ಯಕ್ತಿಯ ಬಗ್ಗೆ ಜಿಲ್ಲಾ ವೈದ್ಯಾಧಿಕಾರಿಯಿಂದ ಮಾಹಿತಿ ಪಡೆದು ಜಿಲ್ಲಾಧಿಕಾರಿಗಳು ವಾರಸುದಾರರನ್ನು ಖಚಿತಪಡಿಸಿ, ಸಾಮಾಜಿಕ ಭದ್ರತೆ ಮತ್ತು ಪಿಂಚಣಿ ನಿರ್ದೇಶನಾಲಯದ ನಿರ್ದೇಶಕರಿಗೆ ನೀಡಬೇಕು. ನಿರ್ದೇಶಕರು 1 ಲಕ್ಷವನ್ನು ವಾರಸುದಾರರ ಬ್ಯಾಂಕ್‌ ಖಾತೆಗೆ ಜಮೆ ಮಾಡಬೇಕು ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT