ADVERTISEMENT

ಮೋದಿ ವಿರುದ್ಧ ಅಶ್ಲೀಲ ಪೋಸ್ಟ್: ಕಾಂಗ್ರೆಸ್ ಕಾರ್ಯಕರ್ತೆ ವಿರುದ್ಧ ದೂರು

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2026, 15:48 IST
Last Updated 26 ಫೆಬ್ರುವರಿ 2026, 15:48 IST
<div class="paragraphs"><p>ಕಾಂಗ್ರೆಸ್</p></div>

ಕಾಂಗ್ರೆಸ್

   

ಬೆಂಗಳೂರು: ಫೇಸ್‌ಬುಕ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅಶ್ಲೀಲವಾಗಿ ಪೋಸ್ಟ್ ಮಾಡಿದ ಕಾಂಗ್ರೆಸ್‌ ಕಾರ್ಯಕರ್ತೆ ಬಿಂದು ಸಿರ ಎಂಬುವರ ವಿರುದ್ಧ ಬಿಜೆಪಿ ಕಾರ್ಯಕರ್ತರು ಮಲ್ಲೇ‍ಶ್ವರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

‘ಬಿಂದು ಸಿರ ಎಂಬುವರು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಎಪ್‌ಸ್ಟೀನ್‌ ಫೈಲ್‌ನಲ್ಲಿ ಪ್ರಧಾನಿ ಮೋದಿ ಹೆಸರು ಇದೆ ಎಂದು ಆರೋಪಿಸಿ ಪೋಸ್ಟ್ ಮಾಡಿದ್ದಾರೆ. ಇದು ಸಾರ್ವಜನಿಕರಲ್ಲಿ ಗೊಂದಲ ಮತ್ತು ದ್ವೇಷ ಬಿತ್ತಲು ಪ್ರಚೋದನೆ ನೀಡುತ್ತದೆ. ಪ್ರಧಾನಿ ವಿರುದ್ಧ ನಡೆಸಿದ ವ್ಯವಸ್ಥಿತ ಅಪಪ್ರಚಾರವಾಗಿದೆ. ಹೀಗಾಗಿ ಪೋಸ್ಟ್ ಮಾಡಿದವರು ಮತ್ತು ಆ ಪೋಸ್ಟ್‌ ಹಂಚಿಕೊಂಡವರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು’ ಎಂದು ಬಿಜೆಪಿ ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯ ಸಂಚಾಲಕ ಪ್ರಶಾಂತ್ ಮಾಕನೂರು ದೂರು ನೀಡಿದ್ದಾರೆ.

ADVERTISEMENT

ದೂರು ಸ್ವೀಕರಿಸಿದ್ದು, ಕಾನೂನು ತಜ್ಞರ ಸಲಹೆ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.