ADVERTISEMENT

ಮುರುಘಾ ಶರಣರ ರಕ್ಷಣೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸಚಿವ ಆರಗ ವಿರುದ್ಧ ದೂರು

​ಪ್ರಜಾವಾಣಿ ವಾರ್ತೆ
Published 30 ಆಗಸ್ಟ್ 2022, 6:30 IST
Last Updated 30 ಆಗಸ್ಟ್ 2022, 6:30 IST
ಗೃಹ ಸಚಿವ ಆರಗ ಜ್ಞಾನೇಂದ್ರ
ಗೃಹ ಸಚಿವ ಆರಗ ಜ್ಞಾನೇಂದ್ರ   

ಬೆಂಗಳೂರು: ಲೈಂಗಿಕ ಕಿರುಕುಳ ಪ್ರಕರಣದ ಆರೋಪಿ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರ ಗೃಹ ಸಚಿವ ಆರಗ ಜ್ಞಾನೇಂದ್ರ, ಪೊಲೀಸ್‌ ಮಹಾನಿರ್ದೇಶಕರು ರಕ್ಷಿಸುತ್ತಿದ್ದಾರೆ ಎಂದು ಆರೋಪಿಸಿ ಮಾನವ ಹಕ್ಕುಗಳ ಹೋರಾಟ ಮತ್ತು ಭ್ರಷ್ಟಾಚಾರ ವಿರೋಧಿ ಸಂಸ್ಥೆಯ ಅಧ್ಯಕ್ಷ ಎಸ್.ಆರ್‌.ರಾಘವೇಂದ್ರ, ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

‘ಪ್ರಕರಣದಲ್ಲಿ ಗೃಹ ಸಚಿವರು ಮತ್ತು ಗೃಹ ಇಲಾಖೆ ಕಾನೂನಿಗೆ ವಿರುದ್ಧವಾಗಿ ಕೆಲಸ ಮಾಡುತ್ತಿದ್ದಾರೆ. ಆರೋಪಿ ಸ್ವಾಮೀಜಿ ಬಂಧಿಸುವಂತೆ ಗೃಹಸಚಿವರು ಸೂಚಿಸಬೇಕಿತ್ತು. ಆದರೆ, ದೂರಿನ ಹಿಂದೆ ಪಿತೂರಿ ಇದೆ ಎಂದು ಹೇಳಿಕೆ ನೀಡಿದ್ದಾರೆ. ಇವರ ಅಧೀನದ ಪೊಲೀಸರ ತನಿಖೆಯಿಂದ ನ್ಯಾಯ ದೊರಕುವ ವಿಶ್ವಾಸವಿಲ್ಲ’ ಎಂದಿದ್ದಾರೆ.

ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ನೇತೃತ್ವದ ತನಿಖೆ ಉಸ್ತುವಾರಿ ಇರಬೇಕು. ದೇಶದ ಉನ್ನತ ತನಿಖಾ ಸಂಸ್ಥೆಗಳಿಗೆ ಪ್ರಕರಣ ವರ್ಗಾಯಿಸಬೇಕು ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.