ADVERTISEMENT

ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್‌: ಕಲಾವಿದನ ವಿರುದ್ಧ ಬಿಜೆಪಿ ದೂರು

​ಪ್ರಜಾವಾಣಿ ವಾರ್ತೆ
Published 16 ಜೂನ್ 2025, 15:47 IST
Last Updated 16 ಜೂನ್ 2025, 15:47 IST
<div class="paragraphs"><p> ನರೇಂದ್ರ ಮೋದಿ</p></div>

ನರೇಂದ್ರ ಮೋದಿ

   

ಪಿಟಿಐ ಚಿತ್ರ

ಬೆಂಗಳೂರು: ಕಲಾವಿದ ಟಿ.ಎಫ್‌.ಹಾದಿಮನಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಫೇಸ್‌ಬುಕ್‌ನಲ್ಲಿ ಅವಹೇಳನಾಕಾರಿಯಾಗಿ ಫೋಸ್ಟ್ ಹಾಕಿದ್ದಾರೆ ಎಂದು ಆರೋಪಿಸಿ, ಯಶವಂತಪುರ ಸೈಬರ್ ಠಾಣೆಗೆ ಬಿಜೆಪಿ ಮುಖಂಡರು ದೂರು ನೀಡಿದ್ದಾರೆ.

ADVERTISEMENT

ಪಕ್ಷದ ರಾಜ್ಯ ವಕ್ತಾರ ಮತ್ತು ವಕೀಲ ವೆಂಕಟೇಶ ದೊಡ್ಡೇರಿ ಅವರು ದೂರು ನೀಡಿದ್ದಾರೆ.

‘ಹಾದಿಮನಿ ಅವರು ನರೇಂದ್ರ ಮೋದಿ ಅವರಿಗೆ ಅವಮಾನ ಆಗುವಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ. ಹಾದಿಮನಿ ಅವರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡು ಬಂಧಿಸಬೇಕು’ ಎಂದು ದೂರಿನಲ್ಲಿ ಕೋರಲಾಗಿದೆ.

‘ಮೋದಿ ಅವರ ಬಗ್ಗೆ ಕೋಟ್ಯಂತರ ಜನರು ಗೌರವ– ಅಭಿಮಾನ ಹೊಂದಿದ್ದು, ಅವರ ಮನಸ್ಸಿಗೆ ಈ ಪೋಸ್ಟ್ ನೋಡಿ ನೋವಾಗಿದೆ. ಮೋದಿಯವರ ಚಾರಿತ್ರ್ಯವಧೆ ಮಾಡುವ ಹಾದಿಮನಿ ಮತ್ತು ಇತರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ದೂರು ನೀಡಲಾಗಿದೆ’ ಎಂದು ವಿಧಾನ ಪರಿಷತ್‌ನ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಹೇಳಿದರು.

ಕಾನೂನು ತಜ್ಞರ ಜೊತೆಗೆ ಚರ್ಚಿಸಿ ಎಫ್‍ಐಆರ್ ದಾಖಲು ಮಾಡಿಕೊಳ್ಳಲಾಗುವುದು ಎಂಬುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಬಿಜೆಪಿ ಮುಖಂಡರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.