ADVERTISEMENT

ಪಂಕಜ್‌ ಕುಮಾರ್‌ ಪಾಂಡೆ ವಿರುದ್ಧ ಎಸಿಬಿಗೆ ದೂರು

‘ಆರೋಗ್ಯ ಕವಚ‘ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ

​ಪ್ರಜಾವಾಣಿ ವಾರ್ತೆ
Published 19 ಜನವರಿ 2021, 15:22 IST
Last Updated 19 ಜನವರಿ 2021, 15:22 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ‘ಆರೋಗ್ಯ ಕವಚ’ ಯೋಜನೆ ಗುತ್ತಿಗೆದಾರರಾಗಿರುವ ಜಿವಿಕೆ– ಇಎಂಆರ್‌ಐ ಕಂಪನಿ ಜತೆ ಸೇರಿ ಆರೋಗ್ಯ ಇಲಾಖೆ ಆಯುಕ್ತ ಪಂಕಜ್‌ ಕುಮಾರ್‌ ಪಾಂಡೆ ಅಕ್ರಮ ಎಸಗುತ್ತಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಹೋರಾಟಗಾರ ದಿನೇಶ್ ಕಲ್ಲಳ್ಳಿ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ಕ್ಕೆ ದೂರು ನೀಡಿದ್ದಾರೆ.

ಎಸಿಬಿ ಬೆಂಗಳೂರು ನಗರ ಘಟಕದ ಎಸ್‌ಪಿ ಕುಲದೀಪ್‌ ಕುಮಾರ್ ಆರ್. ಜೈನ್ ಅವರಿಗೆ ಸೋಮವಾರ 21 ಪುಟಗಳ ದೂರು ಮತ್ತು ಹಲವು ದಾಖಲೆಗಳನ್ನು ಸಲ್ಲಿಸಿರುವ ಅವರು, ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆ ಅಡಿಯಲ್ಲಿ ಪಾಂಡೆ ವಿರುದ್ಧ ಪ್ರಕರಣ ದಾಖಲು ಮಾಡುವಂತೆ ಕೋರಿದ್ದಾರೆ.

2017ರ ಜನವರಿಯಿಂದ 2019ರ ಜನವರಿವರೆಗೆ ಆರೋಗ್ಯ ಕವಚ ಯೋಜನೆ ಮೇಲುಸ್ತುವಾರಿಗೆ ಪ್ರತ್ಯೇಕ ಉಪ ನಿರ್ದೇಶಕರನ್ನು ನೇಮಿಸಲಾಗಿತ್ತು. ಈ ಅವಧಿಯಲ್ಲಿ ಆಂಬುಲೆನ್ಸ್‌ಗಳ ಸಂಚಾರ ಮತ್ತು ಕಾರ್ಯನಿರ್ವಹಣೆ ಮೇಲೆ ವ್ಯಾಪಕ ನಿಗಾ ಇರಿಸಲಾಗಿತ್ತು. ಜಿವಿಕೆ ಕಂಪನಿ ಹೆಚ್ಚುವರಿಯಾಗಿ ಪಡೆದಿದ್ದ ₹ 135 ಕೋಟಿಯನ್ನು ರಾಜ್ಯ ಸರ್ಕಾರ ವಸೂಲಿ ಮಾಡಿತ್ತು. ಆದರೆ, 2019ರ ಜನವರಿಯಿಂದ ಉಪ ನಿರ್ದೇಶಕರ ಹುದ್ದೆಗೆ ಕಿರಿಯ ಅಧಿಕಾರಿಯೊಬ್ಬರನ್ನು ನೇಮಿಸಿದ ಆಯುಕ್ತರು, ವ್ಯಾಪಕ ಭ್ರಷ್ಟಾಚಾರಕ್ಕೆ ಅವಕಾಶ ಕಲ್ಪಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.