ADVERTISEMENT

ಸಿ.ಡಿ: ರಾಜ್ಯಪಾಲರು, ಲೋಕಾಯುಕ್ತರಿಗೆ ದೂರು

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2021, 15:34 IST
Last Updated 25 ಮಾರ್ಚ್ 2021, 15:34 IST

ಬೆಂಗಳೂರು: ಮಾಜಿ ಸಚಿವ ರಮೇಶ ಜಾರಕಿಹೊಳಿ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ, ಅಧಿಕೃತ ರಹಸ್ಯ ಕಾಯ್ದೆಗಳ ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸುವಂತೆ ಒತ್ತಾಯಿಸಿ ರಾಜಾಜಿನಗರ ನಿವಾಸಿ ಗೀತಾ ಮಿಶ್ರಾ ಎಂಬುವವರು ರಾಜ್ಯಪಾಲರು ಹಾಗೂ ಲೋಕಾಯುಕ್ತರಿಗೆ ದೂರು ಸಲ್ಲಿಸಿದ್ದಾರೆ.

‘ಸಚಿವರಾಗಿದ್ದ ರಮೇಶ ಜಾರಕಿಹೊಳಿ ಕೆಲಸದ ಆಮಿಷವೊಡ್ಡಿ ಯುವತಿಯನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದಾರೆ. ಈ ನಡವಳಿಕೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ವ್ಯಾಪ್ತಿಗೆ ಬರುತ್ತದೆ. ಯುವತಿಯ ಜತೆಗೆ ಸರ್ಕಾರಕ್ಕೆ ಸಂಬಂಧಿಸಿದ ರಹಸ್ಯಗಳನ್ನು ಹಂಚಿಕೊಂಡಿದ್ದಾರೆ. ಸಂವಿಧಾನಾತ್ಮಕವಾಗಿ ತೆಗೆದುಕೊಂಡ ಪ್ರತಿಜ್ಞೆಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಈ ಎಲ್ಲ ಅಂಶಗಳನ್ನೂ ಆಧರಿಸಿ ಅವರ ವಿರುದ್ಧ ತನಿಖೆ ನಡೆಸಬೇಕು’ ಎಂದು ಕೋರಿದ್ದಾರೆ.

ರಾಜ್ಯಪಾಲರಿಗೆ ಸಲ್ಲಿಸಿರುವ ದೂರಿನಲ್ಲಿ ರಮೇಶ ಜಾರಕಿಹೊಳಿ ವಿರುದ್ಧ ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸಲು ನಿರ್ದೇಶನ ನೀಡುವಂತೆ ಕೋರಿದ್ದಾರೆ. ಲೋಕಾಯುಕ್ತರಿಗೆ ನಿಗದಿತ ನಮೂನೆಯಲ್ಲಿ ದೂರು ಸಲ್ಲಿಸಿರುವ ಗೀತಾ, ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿ ವಾಹಿನಿಗಳು ಪ್ರಸಾರ ಮಾಡಿರುವ ವಿಡಿಯೊ ದೃಶ್ಯಗಳ ತುಣುಕುಗಳುಳ್ಳ ಸಿ.ಡಿಯನ್ನೂ ಸಲ್ಲಿಸಿದ್ದಾರೆ. ಮಾಜಿ ಸಚಿವರ ವಿರುದ್ಧ ತನಿಖೆ ನಡೆಸುವಂತೆ ಲೋಕಾಯುಕ್ತರಿಗೆ ಮನವಿ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.