
ಎಚ್.ಡಿ. ರಂಗನಾಥ್
ಬೆಂಗಳೂರು: ಗ್ರಾಮಗಳಲ್ಲಿ ವಾಸವಿದ್ದು, ವ್ಯವಸಾಯ ಮಾಡುವ ಗಂಡು ಮಕ್ಕಳನ್ನು ಮದುವೆ ಆಗುವ ಹೆಣ್ಣು ಮಕ್ಕಳಿಗೆ ಮುಂಬರುವ ಅಧಿವೇಶನದಲ್ಲಿ ವಿಶೇಷ ಭತ್ಯೆ ಹಾಗೂ ಸ್ಥಾನಮಾನ ಘೋಷಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕುಣಿಗಲ್ ಶಾಸಕ ಎಚ್.ಡಿ. ರಂಗನಾಥ್ ಮನವಿ ಮಾಡಿದ್ದಾರೆ.
ಈ ಸಂಬಂಧ ಸಿಎಂ ಅವರಿಗೆ ಪತ್ರ ಬರೆದಿದ್ದಾರೆ.
'ಕುಣಿಗಲ್ ತಾಲ್ಲೂಕಿನಲ್ಲಿ ವ್ಯವಸಾಯ ಮಾಡಿಕೊಂಡು ಜೀವನ ಸಾಗಿಸುತ್ತಿರುವ ರೈತರನ್ನು ಮದುವೆ ಆಗಲು ಹೆಣ್ಣು ಮಕ್ಕಳು ನಿರಾಕರಿಸುತ್ತಿದ್ದಾರೆ. 30 ವರ್ಷ ಆದರೂ ಮದುವೆ ಆಗದೇ ತೊಂದರೆಯಲ್ಲಿದ್ದಾರೆ' ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
'ಹಾಗಾಗಿ ಹಳ್ಳಿಗಳಲ್ಲಿ ವಾಸವಿದ್ದು, ವ್ಯವಸಾಯ ಮಾಡಿಕೊಂಡಿರುವ ಗಂಡು ಮಕ್ಕಳನ್ನು ಮದುವೆ ಆಗುವ ಹೆಣ್ಣು ಮಕ್ಕಳಿಗೆ ಮುಂಬರುವ ಅಧಿವೇಶನದಲ್ಲಿ ವಿಶೇಷ ಭತ್ಯೆ ಹಾಗೂ ವಿಶೇಷ ಸ್ಥಾನಮಾನವನ್ನು ನೀಡಬೇಕೆಂದು ಕೋರುತ್ತೇನೆ' ಎಂದು ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.