ADVERTISEMENT

ರೆಸಾರ್ಟ್‌ಗೆ ಬರುವಂತೆ ಕಾಂಗ್ರೆಸ್‌ ಜೆಡಿಎಸ್‌, ಶಾಸಕರಿಗೆ ನಾಯಕರಿಂದ ಬುಲಾವ್‌

​ಪ್ರಜಾವಾಣಿ ವಾರ್ತೆ
Published 15 ಜನವರಿ 2019, 13:58 IST
Last Updated 15 ಜನವರಿ 2019, 13:58 IST
   

ಬೆಂಗಳೂರು: ಆಪರೇಶನ್‌ ಕಮಲದ ಬೀತಿಯಲ್ಲಿರುವ ದೋಸ್ತಿ ಸರ್ಕಾರ ತಮ್ಮ ಶಾಸಕರಿಗೆ ಬೆಂಗಳೂರಿನಬಿಡದಿ ಸಮೀಪ ಇರುವ ‘ಈಗಲ್‌ಟನ್‌ ರೆಸಾರ್ಟ್‌‘ಗೆ ಬರುವಂತೆಸೂಚಿಸಿದೆ.

ಜೆಡಿಎಸ್‌ ಮತ್ತು ಕಾಂಗ್ರೆಸ್‌ನ ಎಲ್ಲಾ ಶಾಸಕರು ಬುಧವಾರ ಬೆಳಗ್ಗೆಯ ಹೊತ್ತಿಗೆ ರೆಸಾರ್ಟ್‌ಗೆ ಬರುವಂತೆ ಸೂಚನೆ ನೀಡಲಾಗಿದೆ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ.

ಈಗಾಗಲೇ ಉತ್ತರ ಕರ್ನಾಟಕ ಭಾಗದ ಹಲವು ಕಾಂಗ್ರೆಸ್‌ ಮತ್ತು ಜೆಡಿಎಸ್‌ ಶಾಸಕರು ಬೆಂಗಳೂರಿನತ್ತ ಮುಖ ಮಾಡಿದ್ದಾರೆ.

ADVERTISEMENT

ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷದ ಶಾಸಕರು ಈಗಲ್‌ಟನ್‌ ರೆಸಾರ್ಟ್‌ನಲ್ಲಿ ತಂಗಲಿದ್ದಾರೆ. ಈಗಾಗಲೇ ಕಾಂಗ್ರೆಸ್‌ನ ರಾಜ್ಯ ಉಸ್ತುವಾರಿ ವೇಣುಗೋಪಾಲ್‌ ಅವರು ತಂತ್ರಗಳನ್ನು ರೂಪಿಸುತ್ತಿದ್ದು ಅತೃಪ್ತ ಶಾಸಕರ ಮನವೊಲಿಸಲುಮುಂದಾಗಿದ್ದಾರೆ ಎನ್ನಲಾಗಿದೆ.

ಮುಂಬೈನ ಖಾಸಗಿ ಹೊಟೇಲ್‌ನಲ್ಲಿ ಬೀಡು ಬಿಟ್ಟಿರುವ ಅತೃಪ್ತ ಶಾಸಕರಕರೆತರುವ ಹೊಣೆಯನ್ನು ಗೃಹ ಸಚಿವ ಎಂ.ಬಿ.ಪಾಟೀಲ್ ಹಾಗೂ ಸಚಿವ ಜಮೀರ್ ಅಹಮದ್‌ ಅವರಿಗೆ ವಹಿಸಲಾಗಿದೆ ಎಂದು ಕಾಂಗ್ರೆಸ್‌ನ ಉನ್ನತ ಮೂಲಗಳು ತಿಳಿಸಿವೆ. ಇಂದು ರಾತ್ರಿ 8 ಗಂಟೆಗೆ ಎಂ.ಬಿ. ಪಾಟೀಲ್‌ ಮತ್ತು ಜಮೀರ್ ಅಹಮದ್‌ ಮುಂಬೈಗೆ ತೆರಳಿದ್ದಾರೆ ಎನ್ನಲಾಗಿದೆ.

ಇತ್ತ ಮುಖ್ಯಮಂತ್ರಿ ಕುಮಾರಸ್ವಾಮಿ ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿ ಮಾಡಿ ಪ್ರಸಕ್ತ ವಿದ್ಯಮಾನಗಳ ಕುರಿತಂತೆ ಚರ್ಚೆ ಮಾಡಿದ್ದಾರೆ.ಅವರು ಜೆಡಿಎಸ್‌ ಶಾಸಕರ ಮೇಲೆ ನಿಗಾವಹಿಸುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.