ADVERTISEMENT

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ: ‘ಕೈ’ಗೆ ಸೂಕ್ತ ಅಭ್ಯರ್ಥಿಯೇ ಇಲ್ಲ!

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2019, 20:05 IST
Last Updated 14 ಮಾರ್ಚ್ 2019, 20:05 IST
   

ಬೆಂಗಳೂರು: ಬಿಜೆಪಿಯ ಅನಂತಕುಮಾರ್‌ ಪ್ರತಿನಿಧಿಸುತ್ತಿದ್ದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧಿಸಲು ಕಾಂಗ್ರೆಸ್‌ನಲ್ಲಿ ಅಭ್ಯರ್ಥಿಗಳೇ ಇಲ್ಲ!

ಪಕ್ಷ ಸಂಭವನೀಯ ಅಭ್ಯರ್ಥಿಗಳ ಪಟ್ಟಿಯಲ್ಲಿ ಬಿಟಿಎಂ ಲೇಔಟ್‌ ಶಾಸಕ, ಪಕ್ಷದ ಹಿರಿಯ ನಾಯಕ ರಾಮಲಿಂಗಾರೆಡ್ಡಿ ಮತ್ತು ಗೋವಿಂದರಾಜನಗರ ಕ್ಷೇತ್ರದ ಮಾಜಿ ಶಾಸಕ ಪ್ರಿಯಕೃಷ್ಣ ಹೆಸರನ್ನು ನಮೂದಿಸಿದ್ದರೂ ಇಬ್ಬರು ಸ್ಪರ್ಧಿಸಲು ಹಿಂದೇಟು ಹಾಕಿದ್ದಾರೆ.

ಹೀಗಾಗಿ, ಗುರಪ್ಪ ನಾಯ್ಡು ಅವರನ್ನು ಕಣಕ್ಕಿಳಿಸುವ ಬಗ್ಗೆ ಕಾಂಗ್ರೆಸ್‌ನಲ್ಲಿ ಚರ್ಚೆ ನಡೆದಿದೆ. ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ನಡೆದ ಸಭೆಯಲ್ಲಿ ಗುರಪ್ಪ ಅವರನ್ನು ಅಭ್ಯರ್ಥಿ ಮಾಡುವ ಬಗ್ಗೆ ರಾಜ್ಯ ನಾಯಕರು ಸಮಾಲೋಚನೆ ನಡೆಸಿದ್ದಾರೆ.

ADVERTISEMENT

2018ರ ವಿಧಾನಸಭೆ ಚುನಾವಣೆಯಲ್ಲಿ ಪದ್ಮನಾಭ ಕ್ಷೇತ್ರದಿಂದ ಟಿಕೆಟ್‌ ಪಡೆದವರ ಪಟ್ಟಿಯಲ್ಲಿ ಹೆಸರು ಹೊಂದಿದ್ದ ನಾಯ್ಡು, ಕೊನೆಕ್ಷಣದಲ್ಲಿ ಅವಕಾಶ ವಂಚಿತರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.