ADVERTISEMENT

ವೇಣುಗೋಪಾಲ್‌ ಹೈಕಮಾಂಡ್‌ ಏಜೆಂಟ್‌: ಅಶೋಕ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2025, 16:02 IST
Last Updated 3 ಡಿಸೆಂಬರ್ 2025, 16:02 IST
ಆರ್‌.ಅಶೋಕ
ಆರ್‌.ಅಶೋಕ   

ಬೆಂಗಳೂರು: ‘ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಕಾಂಗ್ರೆಸ್‌ ಹೈಕಮಾಂಡ್‌ ನಾಯಕರ ಏಜೆಂಟ್‌’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಟೀಕಿಸಿದ್ದಾರೆ. 

ಈ ಕುರಿತು ‘ಎಕ್ಸ್‌’ನಲ್ಲಿ ಹೇಳಿಕೆ ಹಾಕಿರುವ ಅವರು, ‘ಕಾಂಗ್ರೆಸ್‌ ಪಕ್ಷ ಸೇರಿ 20 ವರ್ಷಗಳ ನಂತರ ಇದೇ ಮೊದಲ ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮನೆಗೆ ‘ಹೋಂ ಟೂರ್‌’ ಮಾಡಿದ್ದಾರೆ. ನಾಟಿಕೋಳಿ ಸವಿದಿದ್ದಾರೆ. ಮುಂದಿನ ಉಪಾಹಾರ ಸಭೆ ಎಲ್ಲಿ, ಯಾರ ಜತೆ ಎನ್ನುವ ಸೂಚನೆಯನ್ನು ವೇಣುಗೋಪಾಲ್‌ ನೀಡುವ ಮೊದಲು ಸರ್ಕಾರಿ ಶಾಲೆ ಕಡೆ ಪ್ರವಾಸ ಮಾಡಿ ಬನ್ನಿ’ ಎಂದು ಹೇಳಿದ್ದಾರೆ.

‘ಇಂತಹ ಲಜ್ಜೆಗೆಟ್ಟ ಸರ್ಕಾರವನ್ನು ಇಡೀ ಪ್ರಪಂಚದ ಇತಿಹಾಸದಲ್ಲೇ ಕಾಣಲು ಸಾಧ್ಯವಿಲ್ಲ. ಶೌಚಾಲಯಗಳೇ ಇಲ್ಲದ ಶಾಲೆಗಳು, ಶಿಥಿಲಾವಸ್ಥೆಯಲ್ಲಿರುವ ಶಾಲಾ ಕೊಠಡಿಗಳು, ಬಿದ್ದು ಹೋಗುತ್ತಿರುವ ಗೋಡೆಗಳು, ಶಿಕ್ಷಕರಿಲ್ಲದ ತರಗತಿಗಳನ್ನು ಒಮ್ಮೆ ಕಣ್ತುಂಬಿಕೊಂಡು ಬನ್ನಿ’ ಎಂದು ಸಿದ್ದರಾಮಯ್ಯ ಅವರಿಗೆ ಸಲಹೆ ನೀಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.