ಬೆಂಗಳೂರು: ಭೂ ಸುಧಾರಣೆ, ಎಪಿಎಂಸಿ, ಕಾರ್ಮಿಕ ಕಾಯ್ದೆಗಳ ತಿದ್ದುಪಡಿಯನ್ನು ತಿರಸ್ಕರಿಸಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಸೋಮವಾರ ರಾಜ್ಯಪಾಲರಿಗೆ ಮನವಿ ಮಾಡಿದೆ.
ಸೋಮವಾರ ಮಧ್ಯಾಹ್ನ ರಾಜ್ಯಪಾಲರ ಬಳಿಗೆ ನಿಯೋಗ ತೆರಳಿದ ಕಾಂಗ್ರೆಸ್ ಈ ಸಂಬಂಧ ಮನವಿ ಸಲ್ಲಿಸಿದೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಉಸ್ತುವಾರಿ ಹೊತ್ತಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್ ನಿಯೋಗದಲ್ಲಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.