ADVERTISEMENT

ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದರೆ ಕಾವೇರಿ ನೀರು: ಸಂಸದ ಡಿ.ಕೆ.ಸುರೇಶ್

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2021, 2:38 IST
Last Updated 15 ಡಿಸೆಂಬರ್ 2021, 2:38 IST
ಸಭೆಯಲ್ಲಿ ಸಂಸದ ಡಿ.ಕೆ.ಸುರೇಶ್ ಮಾತನಾಡಿದರು. ಆರ್.ಕೆ.ರಮೇಶ್, ಬೆಂಗಳೂರು ದಕ್ಷಿಣ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಕೃಷ್ಣಪ್ಪ ಹಾಗೂ ಮುಖಂಡರು ಇದ್ದಾರೆ
ಸಭೆಯಲ್ಲಿ ಸಂಸದ ಡಿ.ಕೆ.ಸುರೇಶ್ ಮಾತನಾಡಿದರು. ಆರ್.ಕೆ.ರಮೇಶ್, ಬೆಂಗಳೂರು ದಕ್ಷಿಣ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಕೃಷ್ಣಪ್ಪ ಹಾಗೂ ಮುಖಂಡರು ಇದ್ದಾರೆ   

ಬೆಂಗಳೂರು: ‘‌ಸಿದ್ದರಾಮಯ್ಯ ಕಾಂಗ್ರೆಸ್‌ ಅವಧಿಯಲ್ಲಿ ಜಿಗಣಿಯನ್ನು ಪುರಸಭೆಯನ್ನಾಗಿ ಮಾಡಿದರು. ಕಾವೇರಿ ನೀರು ಕೊಡಲೂ ಯೋಜನೆ ರೂಪಿಸಲಾಗಿತ್ತು. ಸರ್ಕಾರ ಬದಲಾದ ಬಳಿಕ ಯೋಜನೆ ಕೈಬಿಡಲಾಗಿದೆ. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ, ಕಾವೇರಿ ನೀರು ಪೂರೈಸಿಯೇ ತೀರುತ್ತೇವೆ’ ಎಂದು ಸಂಸದ ಡಿ.ಕೆ.ಸುರೇಶ್‌ ಹೇಳಿದರು.

ಜಿಗಣಿ ಪುರಸಭೆ ಚುನಾವಣೆ ಅಂಗವಾಗಿಬಂಡೇನಲ್ಲಸಂದ್ರದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

ಕಾಂಗ್ರೆಸ್ ಮುಖಂಡ ಆರ್.ಕೆ.ರಮೇಶ್, ‘ಜಿಗಣಿ ಕೆರೆ ಅಭಿವೃದ್ದಿಗಾಗಿ ಸಿದ್ದರಾಮಯ್ಯ ಅವರ ಸರ್ಕಾರದ ಅವಧಿಯಲ್ಲಿ ₹3 ಕೋಟಿ ಬಿಡುಗಡೆ ಮಾಡಲಾಗಿತ್ತು. ಆದರೆ, ಕೆರೆ ಅಭಿವೃದ್ದಿ ಆಗಲೇ ಇಲ್ಲ. ಬಿಜೆಪಿ ಸರ್ಕಾರ ಬಂದ ನಂತರ ಜಿಗಣಿ ವ್ಯಾಪ್ತಿಯಲ್ಲಿ ಯಾವುದೇ ಅಭಿವೃದ್ದಿ ಕಾರ್ಯಗಳಾಗಿಲ್ಲ. ಬಿಡುಗಡೆಯಾದಹಣ ಏನಾಯಿತು’ ಎಂದು ಪ್ರಶ್ನಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.