
ಪ್ರಜಾವಾಣಿ ವಾರ್ತೆ
ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಇವಿಎಂನಿಂದಲೇ ಆಯ್ಕೆಯಾದ ಕಾಂಗ್ರೆಸ್ ನಾಯಕರು ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮತಪತ್ರ ಬಳಸಲು ನಿರ್ಧರಿಸಿರುವುದು ಅವರ ರಾಜಕೀಯ ಭಂಡತನ ಎಂದು ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ‘ಎಕ್ಸ್’ನಲ್ಲಿ ಹೇಳಿಕೆ ನೀಡಿರುವ ಅವರು, ‘ರಾಜಕಾರಣಕ್ಕಾಗಿ ಕಾಂಗ್ರೆಸ್ ಏನು ಬೇಕಾದರೂ ಮಾಡುತ್ತದೆ. ಇದು ವ್ಯವಸ್ಥೆಯನ್ನೇ ಬುಡಮೇಲು ಮಾಡುವ ತಂತ್ರ. 1980ರ ದಶಕದವರೆಗೂ ಮತಪತ್ರ ವ್ಯವಸ್ಥೆ ಇತ್ತು. ಈಗ ಮತ್ತೆ ಅದೇ ವ್ಯವಸ್ಥೆ ತಂದು 40 ವರ್ಷ ಹಿಂದಕ್ಕೆ ತೆಗೆದುಕೊಂಡು ಹೋಗುತ್ತಿದ್ದಾರೆ. ಕಾಂಗ್ರೆಸ್ ಭೂತಕಾಲದ ಪಕ್ಷ. ಪ್ರಸ್ತುತತೆ ಬೇಕಿಲ್ಲ. ರಾಜ್ಯದ ಪ್ರಗತಿಪರ ಚಿಂತನೆ, ವೈಜ್ಞಾನಿಕತೆಗೆ ಮೋಸ ಮಾಡುತ್ತಿದೆ’ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.