ADVERTISEMENT

ಕಾಂಗ್ರೆಸ್: ಬೆಳಗಾವಿಯಲ್ಲಿ ಚುನಾವಣೆ ಸಮಿತಿ ಸಭೆ ಇಂದು

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2022, 20:38 IST
Last Updated 17 ಡಿಸೆಂಬರ್ 2022, 20:38 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಕೆಪಿಸಿಸಿ ಚುನಾವಣಾ ಸಮಿತಿಯ ಮೊದಲ ಸಭೆ ಭಾನುವಾರ (ಡಿ.18) ಬೆಳಗಾವಿಯ ಜಿಲ್ಲಾ ಕಾಂಗ್ರೆಸ್‌ ಭವನದಲ್ಲಿ ನಡೆಯಲಿದೆ.

ವಿಧಾನಸಭೆ ಚುನಾವಣೆಗೆ ಅಗತ್ಯ ತಯಾರಿ ನಡೆಸಲು 37 ಸದಸ್ಯರು, ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ಯುವ ಕಾಂಗ್ರೆಸ್‌ನ ರಾಜ್ಯ ಘಟಕ, ಎನ್‌ಎಸ್‌ಯುಐ, ಮಹಿಳಾ ಕಾಂಗ್ರೆಸ್ ಹಾಗೂ ಸೇವಾದಳದ ಅಧ್ಯಕ್ಷರು ಇರುವ ಸಮಿತಿಯನ್ನು ಇದೇ 14ರಂದು ರಚಿಸಲಾಗಿತ್ತು.

ಬೆಳಗಾವಿಯಲ್ಲಿ ನಡೆಯಲಿರುವ ಸಭೆಯಲ್ಲಿ ಚುನಾವಣಾ ಕಾರ್ಯತಂತ್ರಗಳ ಬಗ್ಗೆ ಚರ್ಚೆ ನಡೆಸಲಾಗುತ್ತದೆ. ಸಭೆಯಲ್ಲಿ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹಾಗೂ ಸಮಿತಿಯ ಸದಸ್ಯರೂ ಆಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಉಭಯ ಸದನಗಳಲ್ಲಿ ಶಾಸಕಾಂಗ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ, ಬಿ.ಕೆ. ಹರಿಪ್ರಸಾದ್‌ ಭಾಗವಹಿ
ಸಲಿದ್ದಾರೆ.

ADVERTISEMENT

ಡಿ.19ರಂದು ಸುರ್ಜೇವಾಲ ಸಮ್ಮುಖದಲ್ಲಿ ಮತ್ತೊಂದು ಸಭೆ ನಡೆಯಲಿದೆ.ಜನವರಿ ಮೊದಲ ವಾರ ಸಿದ್ದರಾಮಯ್ಯ ಮತ್ತು
ಡಿ.ಕೆ. ಶಿವಕುಮಾರ್‌ ನೇತೃತ್ವದಲ್ಲಿ ಬಸ್ ಯಾತ್ರೆ ಶುರುವಾಗಲಿದೆ ಎಂದು ಪಕ್ಷದ ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.