ADVERTISEMENT

ಮಾರ್ಚ್‌ 9ರಂದು ರಾಜ್ಯ ಬಂದ್‌ಗೆ ಕಾಂಗ್ರೆಸ್ ಕರೆ

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2023, 13:19 IST
Last Updated 5 ಮಾರ್ಚ್ 2023, 13:19 IST
ಡಿ.ಕೆ.ಶಿವಕುಮಾರ್‌
ಡಿ.ಕೆ.ಶಿವಕುಮಾರ್‌   

ತುಮಕೂರು: ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಖಂಡಿಸಿ ಮಾರ್ಚ್‌ 9ರಂದು ರಾಜ್ಯ ಬಂದ್‌ಗೆ ಕಾಂಗ್ರೆಸ್ ಕರೆ ನೀಡಿದೆ.

ಮಾರ್ಚ್ 9ರಂದು ಬೆಳಿಗ್ಗೆ 9ರಿಂದ 11 ಗಂಟೆ ವರೆಗೆ ಬಂದ್‌ ಮಾಡಲಾಗುವುದು. ಶಾಲೆ, ಕಾಲೇಜು, ಆಸ್ಪತ್ರೆಗಳಿಗೆ ತೊಂದರೆಯಾಗದಂತೆ ಪ್ರತಿಭಟನೆ ನಡೆಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ತಿಳಿಸಿದರು.

ಕೊರಟಗೆರೆ ಪಟ್ಟಣದಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿ, ‘ವ್ಯಾಪಾರಿಗಳು ಕಾನೂನು ಕೈಗೆತ್ತಿಕೊಳ್ಳುವ ಕೆಲಸ ಮಾಡಬಾರದು‌. ಭ್ರಷ್ಟಾಚಾರ ಮುಕ್ತ ರಾಜ್ಯ ನಿರ್ಮಾಣಕ್ಕೆ ಎಲ್ಲರ ಸಹಕಾರ ಅಗತ್ಯ. ಮುಂದಿನ ದಿನಗಳಲ್ಲಿ ಉತ್ತಮ ಆಡಳಿತ ನೀಡುತ್ತೇವೆ. ಮುಂದಿನ ಚುನಾವಣೆಯಲ್ಲಿ ಜನ ಕಾಂಗ್ರೆಸ್‌ಗೆ ಆಶೀರ್ವಾದ ಮಾಡುತ್ತಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ADVERTISEMENT

ಭ್ರಷ್ಟಾಚಾರದಿಂದಾಗಿ ರಾಜ್ಯಕ್ಕೆ ಕಳಂಕ ಬಂದಿದೆ. ಈಗಾಗಲೇ ಮುಖ್ಯಮಂತ್ರಿ ರಾಜೀನಾಮೆಗೆ ಒತ್ತಾಯ ಮಾಡಿದ್ದೇವೆ. ಕಳೆದ ಮೂರುವರೆ ವರ್ಷದಿಂದ ಬಿಜೆಪಿಯ ಬ್ರಹ್ಮಾಂಡ ಭ್ರಷ್ಟಾಚಾರದ ಬಗ್ಗೆ ಜನರ ಗಮನ ಸೆಳೆಯುವ ಕೆಲಸವಾಗಿದೆ. ಈ ಸರ್ಕಾರ ರಾಜ್ಯಕ್ಕೆ ಅಗೌರ ತೋರಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.