ADVERTISEMENT

ಮುಡಾ ಪ್ರಕರಣದಲ್ಲಿ ED ಮೇಲ್ಮನವಿ ವಜಾ: ಸಿ.ಎಂ ನಿವಾಸದ ಮುಂದೆ ಸಂಭ್ರಮಾಚರಣೆ

​ಪ್ರಜಾವಾಣಿ ವಾರ್ತೆ
Published 21 ಜುಲೈ 2025, 15:51 IST
Last Updated 21 ಜುಲೈ 2025, 15:51 IST
<div class="paragraphs"><p>ಮುಖ್ಯಮಂತ್ರಿ ಸಿದ್ದರಾಮಯ್ಯ&nbsp;</p></div>

ಮುಖ್ಯಮಂತ್ರಿ ಸಿದ್ದರಾಮಯ್ಯ 

   

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಇ.ಡಿಯ ಮೇಲ್ಮನವಿಯನ್ನು ವಜಾ ಮಾಡಿ ಸುಪ್ರೀಂ ಕೋರ್ಟ್‌ ಆದೇಶ ನೀಡಿರುವ ಕಾರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸ ‘ಕಾವೇರಿ’ಯ ಮುಂಭಾಗದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಸೋಮವಾರ ಸಂಜೆ ಸಿಹಿ ಹಂಚಿ ಸಂಭ್ರಮಿಸಿದರು.

ತುಮಕೂರು ಪ್ರವಾಸ ಮುಗಿಸಿ ಸಿದ್ದರಾಮಯ್ಯ ಅವರು ತಮ್ಮ ನಿವಾಸಕ್ಕೆ ಬರುತ್ತಿದ್ದಂತೆ, ಅವರ ಕಾರು ತಡೆದ ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿ ಮತ್ತು ಇ.ಡಿ ವಿರುದ್ಧ ಘೋಷಣೆ ಕೂಗಿದರು. ಸಿದ್ದರಾಮಯ್ಯ ಅವರ ಭಾವಚಿತ್ರ ಹಿಡಿದುಕೊಂಡು ಜೈಕಾರ ಹಾಕಿದರು.

ADVERTISEMENT

ಸಂಭ್ರಮಾಚರಣೆ ನೋಡಿ ಕಾರಿನಿಂದ ಇಳಿದ ಸಿದ್ದರಾಮಯ್ಯ ಅವರಿಗೆ ಕಾರ್ಯಕರ್ತರು ಸಿಹಿ ಹಂಚಿದರು. ಕಾಂಗ್ರೆಸ್‌ ಮುಖಂಡ ಎಸ್‌. ಮನೋಹರ್‌ ಮತ್ತಿತರರು ಇದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.