ADVERTISEMENT

ಕಾಂಗ್ರೆಸ್ ಸಿಎಲ್‌ಪಿ ಸಭೆ ಜುಲೈ 3ರಂದು

​ಪ್ರಜಾವಾಣಿ ವಾರ್ತೆ
Published 28 ಜೂನ್ 2022, 20:33 IST
Last Updated 28 ಜೂನ್ 2022, 20:33 IST
   

ಬೆಂಗಳೂರು: ಕಾಂಗ್ರೆಸ್‌ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆ ಜುಲೈ 3ರಂದು ನಗರದ ಶಾಂಗ್ರಿಲಾ ಹೋಟೆಲ್‌ನಲ್ಲಿ ನಡೆಯಲಿದೆ.

‘ಜುಲೈ 18ರಂದು ರಾಷ್ಟ್ರಪತಿ ಆಯ್ಕೆಗೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್‌ ಮತ್ತು ಇತರ ಬೆಂಬಲಿತ ಪಕ್ಷಗಳ ಅಭ್ಯರ್ಥಿಯಾಗಿ ಯಶವಂತ ಸಿನ್ಹಾ ಸ್ಪರ್ಧಿಸಿದ್ದಾರೆ. ಅವರನ್ನು ಬೆಂಬಲಿಸುವ ಕುರಿತು ಸಮಾಲೋಚನೆ ನಡೆಸಲು ಈ ಸಭೆ ನಡೆಯಲಿದೆ’ ಎಂದು ಶಾಸಕಾಂಗ ಪಕ್ಷದ ಕಾರ್ಯದರ್ಶಿಈ. ತುಕಾರಾಂ ತಿಳಿಸಿದ್ದಾರೆ.

ರಾಷ್ಟ್ರಪತಿ ಆಯ್ಕೆಗೆ ನಡೆಯಲಿರುವ ಚುನಾವಣೆಯ ಜೊತೆಗೆ, ಪಕ್ಷಸಂಘಟನೆ, ರಾಜ್ಯ ಸರ್ಕಾರದ ವಿರುದ್ಧ ಹಮ್ಮಿಕೊಳ್ಳಬೇಕಾದ ಹೋರಾಟಗಳ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

ADVERTISEMENT

ವಿದ್ಯಾರ್ಥಿ ಬಸ್‌ಪಾಸ್ ಅವಧಿ ವಿಸ್ತರಣೆ

ಬೆಂಗಳೂರು: ಪದವಿ, ವೃತ್ತಿಪರ ಕೋರ್ಸ್‌, ಕಾನೂನು ಹಾಗೂ ಸ್ನಾತ ಕೋತ್ತರ ಪದವಿ ಅಂತಿಮ ವರ್ಷದ ವಿದ್ಯಾರ್ಥಿಗಳ ರಿಯಾಯಿತಿ ಬಸ್‌ ಪಾಸ್ ಅವಧಿಯನ್ನು ಕೆಎಸ್‌ಆರ್‌ಟಿಸಿ ವಿಸ್ತರಿಸಿದೆ.

‘ಪರೀಕ್ಷೆಗಳು ನಡೆಯುತ್ತಿದ್ದರೆ ಒಂದು ಅಥವಾ ಎರಡು ತಿಂಗಳ ಅವಧಿಗೆ (ಜುಲೈ–ಆಗಸ್ಟ್‌) ನಿಗದಿತ ಮೊತ್ತ ಪಾವತಿಸಿ ರಸೀದಿ ಪಡೆಯಬೇಕು. ಹಳೆಯ ಪಾಸ್ ಮತ್ತು ರಸೀದಿತೋರಿಸಿ ಪ್ರಯಾಣಿಸಬಹುದು’ ಎಂದು ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪ
ಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.