ADVERTISEMENT

ಸಿಎಲ್‌ಪಿ ಸಭೆ 28ರಂದು

​ಪ್ರಜಾವಾಣಿ ವಾರ್ತೆ
Published 24 ಜನವರಿ 2021, 7:04 IST
Last Updated 24 ಜನವರಿ 2021, 7:04 IST
ಸಿದ್ದರಾಮಯ್ಯ
ಸಿದ್ದರಾಮಯ್ಯ    

ಬೆಂಗಳೂರು: ವಿಧಾನ ಮಂಡಲದ ಜಂಟಿ ಅಧಿವೇಶನ ಆರಂಭವಾಗುತ್ತಿರುವ ಕಾರಣ ಇದೇ 28ರಂದು ಬೆಳಿಗ್ಗೆ 9 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆ ಕರೆಯಲಾಗಿದೆ ಎಂದು ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ಹೇಳಿದರು.

‘ವಿಧಾನ ಪರಿಷತ್ ಉಪ ಸಭಾಪತಿ ಚುನಾವಣೆಗೆ ಅಭ್ಯರ್ಥಿ ಕಣಕ್ಕಿಳಿಸುವ ಕುರಿತು ಈ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು’ ಎಂದರು.

ಪರಿಶಿಷ್ಟ ಜಾತಿಯ ಎಡಗೈ ಮುಖಂಡರು ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನ ನೀಡುವಂತೆ ಬೇಡಿಕೆ ಮುಂದಿಟ್ಟ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಆ ಗುಂಪಿನ ನಾಯಕರಿಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಹುದ್ದೆ ನೀಡಬೇಕು. ಇದು ನನ್ನ ಅಭಿಪ್ರಾಯ’ ಎಂದರು.

ADVERTISEMENT

ನಾನು ಮಾತಿಗೆ ಬದ್ಧ: ‘ಬಿಜೆಪಿಗೆ ವಲಸೆ ಹೋದವರಿಗೆ ಈಗ ಅತೃಪ್ತಿ ಕಾಡುತ್ತಿದೆ. ವಲಸೆ ಹೋದವರು ಮೊದಲು ಯಡಿಯೂರಪ್ಪ ಅವರನ್ನು ಮಾತು ತಪ್ಪದ ಮಗ ಎಂದು ಹಾಡಿ ಹೊಗಳುತ್ತಿದ್ದರು. ಈಗ ನಾಲಿಗೆ ಇಲ್ಲದ ನಾಯಕ ಎನ್ನುತ್ತಿದ್ದಾರೆ’ ಎಂದ ಅವರು, ‘ಪ್ರಳಯವಾದರೂ ಸರಿ, ವಲಸಿಗರನ್ನು ಕಾಂಗ್ರೆಸ್‍ಗೆ ಮತ್ತೆ ಸೇರಿಸುವುದಿಲ್ಲ ಎಂದು ನಾನು ಹಿಂದೆ ಹೇಳಿದ್ದೆ. ಅದಕ್ಕೆ ಈಗಲೂ ಬದ್ಧನಾಗಿದ್ದೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.