ADVERTISEMENT

ಬೆಂಗಳೂರು: ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಕಾಂಗ್ರೆಸ್‌ ದೂರು

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2022, 4:36 IST
Last Updated 7 ಏಪ್ರಿಲ್ 2022, 4:36 IST

ಬೆಂಗಳೂರು: ‘ಉರ್ದು ಮಾತನಾಡಲು ನಿರಾಕರಿಸದ್ದಕ್ಕೇಚಂದ್ರಶೇಖರ್‌ ಎಂಬ ಯುವಕನನ್ನು ಕೊಲೆ ಮಾಡಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಬಹಿರಂಗ ಹೇಳಿಕೆ ನೀಡಿದ್ದಾರೆ. ಆ ಮೂಲಕ ಕೋಮು ಸೌಹಾರ್ದ ಕದಡಲು ಪ್ರಯತ್ನಿಸಿದ್ದಾರೆ. ಅವರನ್ನು ಕೂಡಲೇ ಬಂಧಿಸಬೇಕು’ ಎಂದು ಬೆಂಗಳೂರು ಜಿಲ್ಲಾ ಕಾಂಗ್ರೆಸ್‌ ಪ್ರಚಾರ ಸಮಿತಿಯು ಮಲ್ಲೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದೆ.

‘ಜವಾಬ್ದಾರಿಯುತ ಸ್ಥಾನದಲ್ಲಿರುವ ಗೃಹ ಸಚಿವರು ಸೂಕ್ತ ಮಾಹಿತಿಯನ್ನೂ ಪಡೆಯದೆ ಬೇಜವಾಬ್ದಾರಿಯುತ ಹೇಳಿಕೆ ನೀಡಿದ್ದಾರೆ. ಯುವಕನು ದಲಿತ ಸಮುದಾಯಕ್ಕೆ ಸೇರಿದವನು ಎಂದೂ ತಿಳಿಸಿದ್ದಾರೆ. ನಿರ್ದಿಷ್ಟ ಸಮುದಾಯದ ಹೆಸರನ್ನು ಅನವಶ್ಯಕವಾಗಿ ಅವರು ಎಳೆದು ತಂದಿದ್ದಾರೆ. ಈ ವಿಚಾರದಲ್ಲಿ ಸಿ.ಟಿ.ರವಿ ಅವರು ಬೇಜವಾಬ್ದಾರಿಯಿಂದ ನಡೆದುಕೊಂಡಿದ್ದಾರೆ’ ಎಂದೂ ದೂರಿನಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT