ADVERTISEMENT

ರಾಜ್ಯ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಕಾಂಗ್ರೆಸ್ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2020, 5:34 IST
Last Updated 24 ಸೆಪ್ಟೆಂಬರ್ 2020, 5:34 IST
ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ
ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ   

ಬೆಂಗಳೂರು:ರಾಜ್ಯದ ಬಿಜೆಪಿ ಸರ್ಕಾರ ಸದನಹಾಗೂ ಜನರ ವಿಶ್ವಾಸ ಕಳೆದುಕೊಂಡಿದೆ.‌ ಹೀಗಾಗಿ, ರಾಜ್ಯ ಸರ್ಕಾರದ ವಿರುದ್ಧಅವಿಶ್ವಾಸ ನಿರ್ಣಯ ಮಂಡಿಸಲು ನಿರ್ಧರಿಸಲಾಗಿದೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ವಿಧಾನಸೌಧದಲ್ಲಿ ಗುರುವಾರ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯ ಬಳಿಕ ಮಾತನಾಡಿದ ಅವರು, ಸರ್ಕಾರ ಎಲ್ಲಾ ಕ್ಷೇತ್ರದಲ್ಲಿ ವಿಫಲವಾಗಿದೆಎಂದು ದೂರಿದರು.

ಯಡಿಯೂರಪ್ಪ ನೇತೃತ್ವದ‌ ಸರ್ಕಾರದಲ್ಲಿ ಜನರುವಿಶ್ವಾಸ ಕಳೆದುಕೊಂಡಿದ್ದಾರೆ. ಸರ್ಕಾರದಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿ ನಡೆಯುತ್ತಿದೆ. ವರ್ಗಾವಣೆ, ಅನುದಾನ ವಿಚಾರದಲ್ಲಿಯೂ ಭಾರೀ ಭ್ರಷ್ಟಾಚಾರ ನಡೆಯುತ್ತಿದೆ. ಅಭಿವೃದ್ಧಿ ಕೆಲಸ ಕುಂಠಿತವಾಗಿದೆ. ಹಣಕಾಸು ಪರಿಸ್ಥಿತಿ ಅಧೋಗತಿಯಲ್ಲಿದೆಎಂದರು.

ADVERTISEMENT

ಸರ್ಕಾರಜನ ವಿರೋಧಿ ಕಾನೂನು ಜಾರಿಗೊಳಿಸುತ್ತಿದೆ. ರಾಜ್ಯ ಸಾಲಗಾರ ರಾಜ್ಯವಾಗುತ್ತಿದೆ.ಒಂದು ಲಕ್ಷದ ಒಂದು ಸಾವಿರ ಕೋಟಿ‌ ರೂಪಾಯಿಯ ಸಾಲ ಮಾಡಿದೆ ಎಂದೂ ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.