ಬೆಂಗಳೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಸ್ಥಾನ ಹಾಗೂ ಕೆಪಿಸಿಸಿ ಅಧ್ಯಕ್ಷರ ನೇಮಕ ಸಂಬಂಧ ಈ ವಾರದ ಅಂತ್ಯಕ್ಕೆ ಹೈಕಮಾಂಡ್ ನಿರ್ಧಾರ ಕೈಗೊಳ್ಳುವ ಸಾಧ್ಯತೆಗಳಿವೆ. ಶುಕ್ರವಾರ ಅಥವಾ ಶನಿವಾರ ನೇಮಕಾತಿ ಆದೇಶ ಹೊರ ಬೀಳಲಿದೆ ಎಂದು ಹೇಳಲಾಗುತ್ತಿದೆ.
ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ಸಲ್ಲಿಸಿದ್ದು, ಈ ಬಗ್ಗೆ ಪಕ್ಷದ ವರಿಷ್ಠರು ಯಾವುದೇ ನಿರ್ಧಾರ ಕೈಗೊಂಡಿಲ್ಲ. ವಿಧಾನ ಮಂಡಲಅಧಿವೇಶನ ಫೆ. 17ರಿಂದ ಆರಂಭವಾಗಲಿದ್ದು, ಅಷ್ಟರಲ್ಲಿ ವಿರೋಧ ಪಕ್ಷದ ನಾಯಕರನ್ನು ನೇಮಕ ಮಾಡಬೇಕಾಗಿದೆ. ಹಾಗಾಗಿ ಈ ವಾರವೇ ಒಂದು ನಿರ್ಧಾರಕ್ಕೆ ಬರಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.