ಸಹಕಾರ ಸಚಿವ ಕೆ.ಎನ್. ರಾಜಣ್ಣ
-ಪ್ರಜಾವಾಣಿ ಚಿತ್ರ
ಬೆಂಗಳೂರು: ‘ಕೆಪಿಸಿಸಿ ಅಧ್ಯಕ್ಷ ಹುದ್ದೆಯ ವಿಚಾರದಲ್ಲಿ ಗೊಂದಲ ಉಂಟಾಗಲು ಹೈಕಮಾಂಡ್ ಕಾರಣ. ಹೀಗಾಗಿ, ಈ ಗೊಂದಲವನ್ನು ಹೈಕಮಾಂಡ್‌ನವರೇ ನಿವಾರಿಸಲಿ’ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದರು.
‘ಮುಖ್ಯಮಂತ್ರಿ, ಒಂದು ಉಪ ಮುಖ್ಯಮಂತ್ರಿ ಹುದ್ದೆ, ಜೊತೆಗೆ ಲೋಕಸಭೆ ಚುನಾವಣೆವರೆಗೂ ಅಧ್ಯಕ್ಷ ಸ್ಥಾನದಲ್ಲಿ ಡಿ.ಕೆ. ಶಿವಕುಮಾರ್ ಇರುತ್ತಾರೆ ಎಂದು ಹೈಕಮಾಂಡ್ ಹೇಳಿತ್ತು. ಲೋಕಸಭೆ ಚುನಾವಣೆ ಕಳೆದು ಆರು ತಿಂಗಳು ಆಗಿದೆ. ಅಧ್ಯಕ್ಷರ ಬಗ್ಗೆ ಹೈಕಮಾಂಡ್ ಹೇಳಬೇಕು. ಮುಂದಿನ ವಿಧಾನಸಭೆ ಚುನಾವಣೆವರೆಗೂ ಶಿವಕುಮಾರ್ ಅವರೇ ಮುಂದುವರೆಯುತ್ತಾರೆ ಎಂದಾದರೂ ಹೇಳಲಿ’ ಎಂದರು.
‘ಅಧ್ಯಕ್ಷ ಹುದ್ದೆ ವಿಚಾರದಲ್ಲಿ ಅವಶ್ಯ ಇದ್ದರೆ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುತ್ತೇನೆ. ಈಗ ಜನಾಭಿಪ್ರಾಯ 2023ರ ರೀತಿ ಪಕ್ಷದ ಪರ ಇಲ್ಲ. ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಪರಿಸ್ಥಿತಿ ತಿಳಿಸುವ ಪ್ರಯತ್ನ ಮಾಡುತ್ತೇನೆ’ ಎಂದರು.
‘ಸತೀಶ ಜಾರಕಿಹೋಳಿ ಅಧ್ಯಕ್ಷರಾದರೆ ಸಂತೋಷ ಪಡುವವರಲ್ಲಿ ನಾನು ಮೊದಲಿಗ. ಅವರು ಜನಪರ ಕೆಲಸ ಮಾಡಿದ್ದಾರೆ. ಎಲ್ಲರಿಗೂ ಸಿಗುತ್ತಾರೆ. ಎಲ್ಲರಿಗೂ ಗೌರವ ಕೊಡುತ್ತಾರೆ’ ಎಂದೂ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.