ಎನ್.ಶ್ರೀನಿವಾಸ್
ನೆಲಮಂಗಲ: ಸೌಜನ್ಯಾ ಕೊಲೆ ವಿಚಾರ ಮತ್ತು ಧರ್ಮಸ್ಥಳದ ಆಸುಪಾಸಿನಲ್ಲಿ ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಿ ಶ್ರೀ ಕ್ಷೇತ್ರ ಹಾಗೂ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಬಗ್ಗೆ ನಡೆಯುತ್ತಿರುವ ಅಪಪ್ರಚಾರ ಖಂಡಿಸಿ ಕಾಂಗ್ರೆಸ್ ವತಿಯಿಂದ ಯಾತ್ರೆ ಕೈಗೊಳ್ಳಲಾಗಿದೆ ಎಂದು ಶಾಸಕ ಎನ್.ಶ್ರೀನಿವಾಸ್ ಹೇಳಿದರು.
ವೀರೇಂದ್ರ ಹೆಗ್ಗಡೆ ಅವರಿಗೆ ನೈತಿಕ ಸ್ಥೈರ್ಯ ತುಂಬಲು 150ಕ್ಕೂ ಹೆಚ್ಚು ಕಾರುಗಳಲ್ಲಿ ಯಾತ್ರೆ ಕೈಗೊಳ್ಳಲಾಗಿದೆ. ತನಿಖೆ ನಡೆಸಿ ಅಪರಾಧಿಗಳಿಗೆ ಶಿಕ್ಷೆ ವಿಧಿಸಬಹುದು. ಅದರ ಬದಲು ಧಾರ್ಮಿಕ ಕ್ಷೇತ್ರ ಮತ್ತು ಜನರ ಧಾರ್ಮಿಕ ಭಾವನೆಗೆ ಧಕ್ಕೆ ತರಲು ಅಪಪ್ರಚಾರ ನಡೆಸುತ್ತಿರುವುದು ಸರಿಯಲ್ಲ ಎಂದರು.
ಯಾತ್ರೆಯಲ್ಲಿ ಪಾಲ್ಗೊಳ್ಳುವವರು ಕೆಡಿಪಿ ಸದಸ್ಯ ನಾರಾಯಣಗೌಡ (ಮೊಬೈಲ್ ಸಂಖ್ಯೆ 9886605343) ಹಾಗೂ ಯುವ ಮುಖಂಡ ಕಾಚನಹಳ್ಳಿ ಮನು (ಮೊಬೈಲ್ ಸಂಖ್ಯೆ 8105027095) ಅವರನ್ನು ಸಂಪರ್ಕಿಸಿ, ನೋಂದಣಿ ಮಾಡಿಕೊಳ್ಳಲು ಕೋರಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.