ADVERTISEMENT

ಬೆಳಗಾವಿ: ಸಿಎಂ ಆಪ್ತರಿಗೆ 'ಡಿನ್ನರ್ ಪಾರ್ಟಿ' ನೀಡಿದ ಸಚಿವ ಸತೀಶ ಜಾರಕಿಹೊಳಿ

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2025, 18:15 IST
Last Updated 17 ಡಿಸೆಂಬರ್ 2025, 18:15 IST
ಸತೀಶ ಜಾರಕಿಹೊಳಿ
ಸತೀಶ ಜಾರಕಿಹೊಳಿ   

ಬೆಳಗಾವಿ: ನಗರದ ಖಾಸಗಿ ಹೋಟೆಲ್ ನಲ್ಲಿ‌ ಬುಧವಾರ, ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಮತ್ತೊಂದು 'ಡಿನ್ನರ್ ಪಾರ್ಟಿ' ಆಯೋಜನೆ ಮಾಡಿದರು. ಈ ಊಟದ ಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರೇ‌ ಭಾಗವಹಿಸಿದರು.

ಸಿ.ಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ, ಶಾಸಕರಾದ ಕೆ.ಎನ್.ರಾಜಣ್ಣ, ಗಣೇಶ ಹುಕ್ಕೇರಿ, ಬಿ.ಆರ್.ಪಾಟೀಲ, ಆಸಿಫ್ ಸೇಠ್, ವಿಶ್ವಾಸ ವೈದ್ಯ, ಮಹಾಂತೇಶ ಕೌಜಲಗಿ, ಚಳ್ಳಕೆರೆ ಶಾಸಕ ರಘುಮೂರ್ತಿ ಸೇರಿ 20ಕ್ಕೂ ಹೆಚ್ಚು ಶಾಸಕರು ಈ ಪಾರ್ಟಿಯಲ್ಲಿ ಭಾಗಿಯಾದರು ಎಂದು ಮೂಲಗಳು ಖಚಿತಪಡಿಸಿವೆ.

ಈಚೆಗಷ್ಟೇ ಪರಿಶಿಷ್ಟ ಸಮುದಾಯಕ್ಕೆ ಸೇರಿದ ಶಾಸಕರಿಗೆ ಮಾತ್ರ 'ಡಿನ್ನರ್ ಪಾರ್ಟಿ' ನೀಡಿದ್ದ ಸತೀಶ ಈಗ ಮತ್ತೊಮ್ಮೆ ಸಿದ್ದರಾಮಯ್ಯ ಆಪ್ತರನ್ನು ಒಂದೆಡೆ‌ ಸೇರಿಸಿದ್ದಾರೆ.

ADVERTISEMENT

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾದಾಗಿನಿಂದ ಒಂದಿಲ್ಲೊಂದು ಕಡೆ 'ಡಿನ್ನರ್ ಪಾರ್ಟಿ'ಗಳು ನಡೆಯುತ್ತಲೇ‌ ಇರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.