ಡಿಕೆಶಿ
ಬೆಂಗಳೂರು: ‘ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ನಮ್ಮ ಮಾದರಿಯನ್ನು ಇಡೀ ದೇಶ ಪಾಲಿಸುತ್ತಿದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ‘ನಮ್ಮ ಸರ್ಕಾರ ಬಡವರ ಬದುಕಿಗಾಗಿ ನಾವು ಗೃಹಲಕ್ಷ್ಮಿ ಯೋಜನೆ ಜಾರಿ ಮಾಡಿದೆ. ಬಡವರಿಗಾಗಿ ಜಮೀನು, ನಿವೇಶನ, ಪಿಂಚಣಿ, ಮಕ್ಕಳಿಗೆ ಬಿಸಿಯೂಟ ಸೇರಿದಂತೆ ಅನೇಕ ಕಾರ್ಯಕ್ರಮ ಕೊಟ್ಟಿದೆ. ಅದೇ ರೀತಿ ನಾವು ಗ್ಯಾರಂಟಿ ಯೋಜನೆ ನೀಡಿದೆವು. ನಮ್ಮ ಗ್ಯಾರಂಟಿ ಯೋಜನೆಗಳನ್ನು ಪ್ರಧಾನಿ ಸೇರಿದಂತೆ ಬಿಜೆಪಿಯ ಎಲ್ಲ ನಾಯಕರು ಟೀಕೆ ಮಾಡಿದರು’ ಎಂದರು.
‘ಕರ್ನಾಟಕದಲ್ಲಿ ಯೋಜನೆ ಜಾರಿಯಾದ ನಂತರ ಬಿಜೆಪಿಯವರೇ ಮಧ್ಯಪ್ರದೇಶ, ಮಹಾರಾಷ್ಟ್ರ, ದೆಹಲಿ, ಹರಿಯಾಣ ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದರು. ಈಗ ಬಿಹಾರದಲ್ಲಿ ಘೋಷಣೆ ಮಾಡಿದ್ದಾರೆ. ಕರ್ನಾಟಕ ಕಾಂಗ್ರೆಸ್ ಸರ್ಕಾರ ಸದಾ ದೇಶಕ್ಕೆ ಮಾದರಿ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.