ADVERTISEMENT

ಹೈಕಮಾಂಡ್‌ ಒಪ್ಪಿಗೆ ನಂತರ ಶೋಷಿತರ ಸಮಾವೇಶ: ಮುನಿಯಪ್ಪ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2025, 15:20 IST
Last Updated 19 ಫೆಬ್ರುವರಿ 2025, 15:20 IST
ಕೆ.ಎಚ್‌. ಮುನಿಯಪ್ಪ
ಕೆ.ಎಚ್‌. ಮುನಿಯಪ್ಪ   

ಬೆಂಗಳೂರು: ಚುನಾವಣೆಗೂ ಮೊದಲು ಕಾಂಗ್ರೆಸ್‌ ಪಕ್ಷ ನೀಡಿದ್ದ ಭರವಸೆಯಂತೆ ‘ಶೋಷಿತರ ಸಮಾವೇಶ’ ಮಾಡಬೇಕಿದೆ. ಹೈಕಮಾಂಡ್‌ ಅನುಮತಿ ನೀಡಿದ ನಂತರ ಸಮಾವೇಶ ಹಮ್ಮಿಕೊಳ್ಳಲಾಗುತ್ತದೆ ಎಂದು ಆಹಾರ ಸಚಿವ ಕೆ.ಎಚ್‌. ಮುನಿಯಪ್ಪ ಹೇಳಿದರು.

ಸುದ್ದಿಗಾರರ ಜತೆ ಬುಧವಾರ ಮಾತನಾಡಿದ ಅವರು, ವಿಧಾನಸಭಾ ಚುನಾವಣೆಗೂ ಮೊದಲು ಚಿತ್ರದುರ್ಗದಲ್ಲಿ ಹಮ್ಮಿಕೊಂಡಿದ್ದ ಸಮಾವೇಶದಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ಪರಿಶಿಷ್ಟರು, ಹಿಂದುಳಿದ ವರ್ಗ, ಅಲ್ಪ ಸಂಖ್ಯಾತರ ಕಲ್ಯಾಣಕ್ಕಾಗಿ ಸಮಾವೇಶ ನಡೆಸುವ ಭರವಸೆ ನೀಡಲಾಗಿತ್ತು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT