ADVERTISEMENT

ಎರಡೂವರೆ ವರ್ಷ ಪೂರೈಸಿದ ಕಾಂಗ್ರೆಸ್ ಸರ್ಕಾರ; ಸಾಧನೆ ಶೂನ್ಯ: ಅಶೋಕ ಟೀಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 21 ನವೆಂಬರ್ 2025, 15:43 IST
Last Updated 21 ನವೆಂಬರ್ 2025, 15:43 IST
ಆರ್. ಅಶೋಕ 
ಆರ್. ಅಶೋಕ    

ಬೆಂಗಳೂರು: 'ಬರಿದಾಗಿರುವ ಬೊಕ್ಕಸ ತುಂಬಿಸಿಕೊಳ್ಳಲು ಲೂಟಿಗಿಳಿದ ಕಾಂಗ್ರೆಸ್ ಸರ್ಕಾರ ತನ್ನ ದುರಾಡಳಿತದಿಂದ ಎರಡೂವರೆ ವರ್ಷ ಪೂರೈಸಿದೆ' ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಆರೋಪಿಸಿದ್ದಾರೆ.

ಈ ಸಂಬಂಧ ಸಾಮಾಜಿಕ ಮಾಧ್ಯಮ 'ಎಕ್ಸ್‌'ನಲ್ಲಿ ಪೋಸ್ಟ್ ಮಾಡಿರುವ ಅವರು, 'ಕನ್ನಡಿಗರಿಗೆ ದಿನನಿತ್ಯದ ನರಕಯಾತನೆ. ಕಾಂಗ್ರೆಸ್ ಸರ್ಕಾರದ ಸಾಧನೆ ಶೂನ್ಯ, ಅಭಿವೃದ್ಧಿಗೆ ಇಲ್ಲ ಅನುದಾನ, ಫೇಲ್ ಸರ್ಕಾರ' ಎಂದು ಟೀಕಿಸಿದ್ದಾರೆ.

'ಬೆಲೆ ಏರಿಕೆ, ಭ್ರಷ್ಟಾಚಾರ, ಬೃಹತ್ ಸಾಲ ಇದೇ ಕಾಂಗ್ರೆಸ್ ಸರ್ಕಾರದ ಎರಡೂವರೆ ವರ್ಷದ ಸಾಧನೆಯಾಗಿದೆ' ಎಂದು ವಾಗ್ದಾಳಿ ನಡೆಸಿದ್ದಾರೆ.

ADVERTISEMENT

'ಗಾರ್ಬೆಜ್ ಸಿಟಿ, ಗುಂಡಿ ಸಿಟಿ, ಹಗಲು ದರೋಡೆ ಸಿಟಿ. ಇದು ಕಳೆದ 2.5 ವರ್ಷಗಳಲ್ಲಿ ಕಾಂಗ್ರೆಸ್ ಸರ್ಕಾರದ ಸೃಷ್ಟಿಸಿರುವ ಬ್ರ್ಯಾಂಡ್ ಬೆಂಗಳೂರು' ಎಂದು ಆರೋಪಿಸಿದ್ದಾರೆ.

ರಾಜ್ಯ ಕಂಡಂತಹ ಅತ್ಯಂತ ದುರ್ಬಲ, ಅಸಮರ್ಥ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಿದ್ದಾರೆ ಎಂದು ಟೀಕಿಸಿದ್ದಾರೆ. ಈ ಸಂಬಂಧ ಪೋಸ್ಟರ್ ಹಾಗೂ ವಿಡಿಯೊಗಳನ್ನು ಬಿಡುಗಡೆ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.